'ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುವುದರಲ್ಲಿ ತಪ್ಪೇನಿದೆ, ಅದು ಅವರ ಅಭಿಪ್ರಾಯ'; Video
ಇತ್ತೀಚೆಗೆ ನಡೆದ ಒಬಿಸಿ ಸಮಾವೇಶದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ನೀಡಿದ ಹೇಳಿಕೆ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಇಂದು ಸಚಿವ ಬಸವರಾಜ ರಾಯರೆಡ್ಡಿ ಉತ್ತರಿಸುತ್ತಿದ್ದರು.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳುವುದರಲ್ಲಿ ತಪ್ಪೇನಿದೆ? ಎಲ್ಲರಿಗೂ ಅವರದ್ದೇ ಆದ ಅಭಿಪ್ರಾಯಗಳಿರುತ್ತವೆ: ಶಾಸಕ ಪ್ರದೀಪ್ ಈಶ್ವರ್ ಅವರು ಮಾಜಿ ಮುಖ್ಯಮಂತ್ರಿಯನ್ನು ರಾಜ್ಯದ ‘ಮುಂದಿನ ಮುಖ್ಯಮಂತ್ರಿ’ ಎಂದು ಉಲ್ಲೇಖಿಸಿರುವ ಕುರಿತು ರಾಜ್ಯ ಸಚಿವ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗೆ ನಡೆದ ಒಬಿಸಿ ಸಮಾವೇಶದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ನೀಡಿದ ಹೇಳಿಕೆ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಇಂದು ಸಚಿವ ಬಸವರಾಜ ರಾಯರೆಡ್ಡಿ ಉತ್ತರಿಸುತ್ತಿದ್ದರು.
ಪ್ರದೀಪ್ ಈಶ್ವರ್ ಹಾಗೆ ಹೇಳಿದ್ದರೆ ಅದರಲ್ಲಿ ತಪ್ಪೇನಿದೆ? ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇದು ಪಕ್ಷ ನಿರ್ಧರಿಸಬೇಕಾದ ವಿಚಾರ. ಪಕ್ಷವೇ ನಿರ್ಧರಿಸಬೇಕು. ವೈಯಕ್ತಿಕವಾಗಿ ನಾನು ಯಾರನ್ನು ಮೆಚ್ಚುತ್ತೇನೆ ಎಂಬುದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳುವುದರಲ್ಲಿ ತಪ್ಪೇನಿದೆ? ಎಲ್ಲರಿಗೂ ಅವರದ್ದೇ ಆದ ಅಭಿಪ್ರಾಯಗಳಿರುತ್ತವೆ ಎಂದರು.
ಇತ್ತೀಚೆಗೆ ನಡೆದ ಒಬಿಸಿ ಸಮಾವೇಶದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ವಾಗತಿಸುವ ವೇಳೆ ರಾಜ್ಯದ “ಮುಂದಿನ ಮುಖ್ಯಮಂತ್ರಿ” ಎಂದು ಉಲ್ಲೇಖಿಸಿದ್ದರು.
ಇದೇ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಕರ್ನಾಟಕದ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಜಾರಿಗೊಳಿಸುವಂತೆ ಮತ್ತೊಮ್ಮೆ ಒತ್ತಾಯಿಸಿ, ಶೇ.75ರಷ್ಟು ಮೀಸಲಾತಿಗೆ ಆಗ್ರಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



