ರಾಜಕೀಯ

ಸಂಪುಟದಲ್ಲಿ ಮಹಿಳಾ ಮಂತ್ರಿ ಇಲ್ಲದಿರುವುದು ನನ್ನ ತಪ್ಪು; ಅಮೆರಿಕ ಕಂಪನಿಗಳಿಗೆ ಕೇಂದ್ರ ಸರ್ಕಾರ ಸರೆಂಡರ್: ಸುರ್ಜೇವಾಲಾ

ಮಹಿಳಾ ಸಬಲೀಕರಣದ ವಿಚಾರದಲ್ಲಿ ಅತ್ಯಂತ ಗಂಭೀರವಾಗಿದ್ದೇವೆ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದರು.

ಸಂಪುಟದಲ್ಲಿ ಮಹಿಳಾ ಮಂತ್ರಿ ಇಲ್ಲದಿರುವುದು ನನ್ನ ತಪ್ಪು; ಅಮೆರಿಕ ಕಂಪನಿಗಳಿಗೆ ಕೇಂದ್ರ ಸರ್ಕಾರ ಸರೆಂಡರ್: ಸುರ್ಜೇವಾಲಾ
ರಣದೀಪ್ ಸುರ್ಜೇವಾಲಾ
Published On :

ಬೆಂಗಳೂರು: ನನ್ನದೇ ತಪ್ಪಿನಿಂದ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿ ಇಲ್ಲ. ಇದು ದೆಹಲಿಯ ಹೈಕಮಾಂಡ್ ತಪ್ಪಲ್ಲ, ನನ್ನ ತಪ್ಪು. ನಾನೇ ಒಬ್ಬ ಅಭ್ಯರ್ಥಿಯನ್ನು ಫೈನಲ್ ಮಾಡಲು ಸಾಧ್ಯವಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​​ ಸಿಂಗ್​​ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳಿದ್ದರು, ಹೀಗಾಗಿ ಸಾಧ್ಯವಾಗಲಿಲ್ಲ. ಆದರೆ ಮಹಿಳೆಗೆ ಸಚಿವ ಸ್ಥಾನ ನೀಡುವ ಬಗ್ಗೆ ಶೀಘ್ರದಲ್ಲೇ ನಿರ್ಧರಿಸ್ತೇವೆ. ಮಹಿಳಾ ಸಬಲೀಕರಣದ ವಿಚಾರದಲ್ಲಿ ಅತ್ಯಂತ ಗಂಭೀರವಾಗಿದ್ದೇವೆ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದರು. ಹೀಗಾಗಿ ಕುಮಾರಸ್ವಾಮಿಗೆ ಮಾತನಾಡುವ ಹಕ್ಕಿಲ್ಲ ಎಂದವರು ತಿಳಿಸಿದ್ದಾರೆ.

ಇನ್ನೂ ಯುಪಿಐ ಟ್ರಾನ್ಸಾಕ್ಷನ್​​ಗೂ ಟ್ಯಾಕ್ಸ್​​ ವಿಧಿಸಿರುವ ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್​​ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು . ಇದು ದೇಶದ ಜನರಿಗೆ‌ ಮಾಡಿದ ಮೋಸ ಆರೋಪಿಸಿದ್ದಾರೆ. ಬಡವರು, ಮಧ್ಯಮವರ್ಗ ಸೇರಿ ಎಲ್ಲರ ಮೇಲೂ ಇದರ ಪರಿಣಾಮ ಆಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಅಮೆರಿಕ ಕಂಪನಿಗಳಿಗೆ ಸರೆಂಡರ್ ಆಗಿದೆ.

ಯುಪಿಐ ಟ್ರಾನ್ಸಾಕ್ಷನ್ ಮೇಲೆ ಟ್ಯಾಕ್ಸ್​ನಿಂದ ಜನರಿಗೆ ಹೊರೆಯಾಗಲಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ 0.4% ಶುಲ್ಕ ವಿಧಿಸುವುದರಿಂದ ಟ್ರಾನ್ಸಾಕ್ಷನ್ ಟ್ಯಾಕ್ಸ್ ಮುಂದೆ ಎಲ್ಲರಿಗೂ ವಿಸ್ತರಣೆ ಮಾಡುವ ಆತಂಕ ಎದುರಾಗಿದೆ. ಮೋದಿ ಸರ್ಕಾರ ಯುಪಿಐ ಅನ್ನು ಕಲೆಕ್ಷನ್ ಮಷಿನ್ ಆಗಿ ಮಾಡ್ತಿದೆ ಎಂದವರು ವಾಗ್ದಾಳಿ ನಡೆಸಿದ್ದಾರೆ.

ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡುವಂತೆ ರಾಜ್ಯ ಸರ್ಕಾರದ ಆದೇಶ ವಿಚಾರವಾಗಿಯೂ ಪ್ರತಿಕ್ರಿಯಿಸಿರುವ ಅವರು, ಕೇಂದ್ರದ ಗೈಡ್​ಲೈನ್ಸ್​ಗೆ ಬದ್ಧವಾಗಿ ನಮ್ಮ ಸರ್ಕಾರ ನಿರ್ಧರಿಸಿದೆ. ಸರ್ಕಾರ ವಂದೇ ಮಾತರಂಗೆ ಗೌರವ ನೀಡುವ ಕೆಲಸ ಮಾಡಿದೆ. ರಾಷ್ಟ್ರಪತಿ, ರಾಜ್ಯಪಾಲರು, ಪ್ರಧಾನಿ ಬಂದಾಗ ಪೂರ್ಣ ಗೀತೆ ಹಾಡಲಾಗುತ್ತೆ. ವಂದೇ ಮಾತರಂ ಹಾಡುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.