ರಾಜಕೀಯ

ದೇವೇಗೌಡರ ಕುಟುಂಬ ನಿಂದಿಸಿದ್ದಕ್ಕಾಗಿ 'ಕಾಂಟ್ರಾಕ್ಟ್' ರೂಪದಲ್ಲಿ ಬಾಲಕೃಷ್ಣಗೆ ಸಚಿವ ಸ್ಥಾನ: ನಿಖಿಲ್ ಕುಮಾರಸ್ವಾಮಿ

ಹೆಚ್. ಸಿ. ಬಾಲಕೃಷ್ಣ ಸಚಿವ ಸ್ಥಾನ ಸಿಕ್ಕಾಗ ಜನಸೇವೆ ಮಾಡುವುದನ್ನು ಬಿಟ್ಟು ಮತ್ತೆ ದೇವೇಗೌಡರ ಕುಟುಂಬದ ವಿರುದ್ಧ ಮಾತನಾಡುತ್ತಿದ್ದಾರೆ. ಜನ ಇದನ್ನು ಸಹಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು

ದೇವೇಗೌಡರ ಕುಟುಂಬ ನಿಂದಿಸಿದ್ದಕ್ಕಾಗಿ 'ಕಾಂಟ್ರಾಕ್ಟ್' ರೂಪದಲ್ಲಿ ಬಾಲಕೃಷ್ಣಗೆ ಸಚಿವ ಸ್ಥಾನ: ನಿಖಿಲ್ ಕುಮಾರಸ್ವಾಮಿ
ಹೆಚ್.ಸಿ. ಬಾಲಕೃಷ್ಣ, ನಿಖಿಲ್ ಕುಮಾರಸ್ವಾಮಿ ಸಾಂದರ್ಭಿಕ ಚಿತ್ರ
Published On :

ಮಾಲೂರು: ದೇವೇಗೌಡರ ಕುಟುಂಬವನ್ನು ಅತಿಯಾಗಿ ನಿಂದಿಸಿದ್ದಕ್ಕಾಗಿಯೇ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ ಅವರಿಗೆ ಕಾಂಟ್ರಾಕ್ಟ್ ರೂಪದಲ್ಲಿ ಸಚಿವ ಸ್ಥಾನ ನೀಡಲಾಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್. ಸಿ. ಬಾಲಕೃಷ್ಣ ಸಚಿವ ಸ್ಥಾನ ಸಿಕ್ಕಾಗ ಜನಸೇವೆ ಮಾಡುವುದನ್ನು ಬಿಟ್ಟು ಮತ್ತೆ ದೇವೇಗೌಡರ ಕುಟುಂಬದ ವಿರುದ್ಧ ಮಾತನಾಡುತ್ತಿದ್ದಾರೆ. ಜನ ಇದನ್ನು ಸಹಿಸುವುದಿಲ್ಲ. ರಾಜಕೀಯ ನಿಂದನೆ ಬಿಟ್ಟು ಕೆಲಸ ಮತ್ತು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ಮಾಡಲಿ ಎಂದರು.

ಇನ್ನು ನೈಸ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಈ ಯೋಜನೆಯಿಂದಾಗಿ ರೈತರಿಗೆ ದೊಡ್ಡ ಮಟ್ಟದ ಅನ್ಯಾಯವಾಗಿದೆ. ವಾರದಲ್ಲಿ ಇದನ್ನು ಬಹಿರಂಗ ಮಾಡುತ್ತೇವೆ. ರೈತರಿಗೆ ನ್ಯಾಯ ಕೊಡಿಸಲು ನಿರಂತರ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ಕೈಗಾರಿಕೆಗಳ ಸ್ಥಾಪನೆ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರ ಬೃಹತ್ ಕೈಗಾರಿಕೆ ಸಚಿವೆ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಭೂಮಿ, ವಿದ್ಯುತ್ , ನೀರು ಮತ್ತಿತರ ಮೂಲಸೌಕರ್ಯ ಒದಗಿಸುವ ವಿಚಾರದಲ್ಲಿ ಅಸಹಕಾರ ತೋರುತ್ತಾ, ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.