ರಾಜಕೀಯ

'ನಾನು ವೆಜ್, ಅಶೋಕಣ್ಣನಿಗೆ ಇಲ್ಲಿಂದಲೇ ಮೀನು ಕಳುಹಿಸುತ್ತೇನೆ': CM ಡಿ.ಕೆ ಶಿವಕುಮಾರ್ ತಿರುಗೇಟು

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ ಸ್ವಂತ ಡ್ರೆಡ್ಜಿಂಗ್ ಯಂತ್ರ ಖರೀದಿಸುವ ಅಥವಾ ಗುತ್ತಿಗೆ ಆಧಾರದ ಮೇಲೆ ಪಡೆಯುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು.

'ನಾನು ವೆಜ್, ಅಶೋಕಣ್ಣನಿಗೆ ಇಲ್ಲಿಂದಲೇ ಮೀನು ಕಳುಹಿಸುತ್ತೇನೆ': CM ಡಿ.ಕೆ ಶಿವಕುಮಾರ್ ತಿರುಗೇಟು
ಮುಖ್ಯಮಂತ್ರಿ ಡಿಕೆ ಶಿವಕುಮಾರ್ — online desk
Published On :

ಮಂಗಳೂರು: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಿಂದ ಕರಾವಳಿ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಸಚಿವರು ಕೇವಲ ಮೀನು ಊಟ ಸವಿಯಲು ಮಂಗಳೂರಿಗೆ ತೆರಳಿದ್ದರು ಎಂಬ ವಿಪಕ್ಷ ನಾಯಕ ಆರ್. ಅಶೋಕ್ ಅವರ ಟೀಕೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಶನಿವಾರ ಬೆಳಗ್ಗೆ ಮಂಗಳೂರಿನ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನು ಈಗ ನಾನ್‌ವೆಜ್ ತಿನ್ನುವುದಿಲ್ಲ. ಅಶೋಕಣ್ಣನಿಗೆ ಇಲ್ಲಿಂದಲೇ ತಾಜಾ ಮೀನು ಕಳುಹಿಸಿಕೊಡುತ್ತೇನೆ’ ಎಂದು ಹೇಳಿದ್ದಾರೆ.

ಬಳಿಕ ಖುದ್ದು ಬೋಟ್ ಹತ್ತಿ ಸಮುದ್ರ ಮತ್ತು ಅಳಿವೆಬಾಗಿಲಿಗೆ ತೆರಳಿದ ಅವರು, ಇತ್ತೀಚೆಗೆ ಹೂಳು ತುಂಬಿ ಬೋಟ್ ಮುಳುಗಡೆಯಾಗಿದ್ದ ದುರಂತ ಸ್ಥಳವನ್ನು ವೀಕ್ಷಿಸಿದರು.

ಬೋಟ್‌ಗಳು ಹೂಳಿನಲ್ಲಿ ಸಿಲುಕಿಕೊಳ್ಳುತ್ತಿರುವ ಕುರಿತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಮೀನುಗಾರಿಕಾ ಸಂಘಟನೆಗಳ ಸದಸ್ಯರು ವಿವರಿಸಿದರು. ಸಮಸ್ಯೆಯ ಗಂಭೀರತೆಯನ್ನು ಅರಿತ ಡಿಕೆ ಶಿವಕುಮಾರ್, ಡ್ರೆಡ್ಜಿಂಗ್‌ಗೆ ಅಗತ್ಯ ಕ್ರಮ ಕೈಗೊಂಡು ಪರಿಹಾರ ಒದಗಿಸುವ ಭರವಸೆ ನೀಡಿದರು.

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ ಸ್ವಂತ ಡ್ರೆಡ್ಜಿಂಗ್ ಯಂತ್ರ ಖರೀದಿಸುವ ಅಥವಾ ಗುತ್ತಿಗೆ ಆಧಾರದ ಮೇಲೆ ಪಡೆಯುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.