ರಾಜಕೀಯ

'ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ಸಿಎಂಗೆ ಶಾಸನದ ಗಂಧಗಾಳಿಯೇ ಗೊತ್ತಿಲ್ಲ'

ಇವರ ವರಸೆ ಹೇಗಿದೆ ಎಂದರೆ `ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ, ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ’ ಎಂದು ಲೇವಡಿ ಮಾಡಿದ್ದಾರೆ.

'ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ಸಿಎಂಗೆ ಶಾಸನದ ಗಂಧಗಾಳಿಯೇ ಗೊತ್ತಿಲ್ಲ'
ಎಚ್.ಡಿ ಕುಮಾರಸ್ವಾಮಿ
Published On :

ನವದೆಹಲಿ: ಭ್ರಷ್ಟಾಚಾರದ ಆರೋಪ ಹೊತ್ತಿರುವ ಕೆಪಿಎಸ್‌ಸಿಯನ್ನು ಮುಚ್ಚಲು ಕಾನೂನು ತಜ್ಞರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದು, ಮುಖ್ಯಮಂತ್ರಿಗೆ ಶಾಸನದ ಗಂಧಗಾಳಿಯೇ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಲೋಕಸೇವಾ ಆಯೋಗವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ಕೇವಲ ಹತಾಶೆಯಿಂದಷ್ಟೇ ಕೂಡಿಲ್ಲ, ಅದು ಬುದ್ಧಿಗೇಡಿತನ, ಹೊಣೆಗೇಡಿತನ ಮತ್ತು ಅಜ್ಞಾನದ ಪರಮಾವಧಿ.

ಇವರ ವರಸೆ ಹೇಗಿದೆ ಎಂದರೆ 'ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ, ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ' ಎಂದು ಲೇವಡಿ ಮಾಡಿದ್ದಾರೆ.

ಕೆಪಿಎಸ್‌ಸಿ ಸಂಸ್ಥೆ ಚೆನ್ನಾಗಿಯೇ ಇದೆ, ಕೆಟ್ಟ ಜನ ಬಂದು ಕೂತಿದ್ದಾರಷ್ಟೇ. ಬೇಲಿಯೇ ಹೊಲ ಮೇಯುತ್ತಿದೆ. ಅಲ್ಲಿಗೆ ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ವಿಧಾನಸೌಧದ 3ನೇ ಮಹಡಿಯಲ್ಲಿ ಕೂತವರೇ ಎಸಗಿದ ಪಾಪವಲ್ಲವೇ ಇದು? ಆ ಲೆಕ್ಕಕ್ಕೆ ಬಂದರೆ ವಿಧಾನಸೌಧವನ್ನೇ ಮುಚ್ಚಬೇಕು. ನಿಮ್ಮ ಸಾರಥ್ಯದಲ್ಲಿ ಅದೂ ನಡೆದುಹೋಗಲಿ ಎಂದು ಟಾಂಗ್ ನೀಡಿದ್ದಾರೆ.

ಬೇಜವಾಬ್ದಾರಿಯಿಂದ ಚಪಲಕ್ಕೆ ನಾಲಿಗೆ ಜಾರುವ ಮೊದಲು ಕೆಪಿಎಸ್‌ಸಿ ಎಂದರೆ ಏನು? ಅದರ ಸಂರಚನೆ, ಸ್ವರೂಪ ಹೇಗಿರುತ್ತದೆ? ಸಾಂವಿಧಾನಿಕವಾಗಿ ಅದಕ್ಕಿರುವ ರಕ್ಷಣೆ ಏನು? ಆ ಸಂಸ್ಥೆ ನಡೆದುಬಂದ ಹಾದಿ, ಹೆಗ್ಗಳಿಕೆ ಬಗ್ಗೆ ತಿಳಿದುಕೊಳ್ಳಿ. ಹೊಲಕ್ಕೆ ಕಳೆ ಬಿದ್ದರೆ ಅದನ್ನು ಕಿತ್ತೆಸೆಯಬೇಕು, ಹೊಲಕ್ಕೇ ವಿಷವುಣಿಸುವ ಕೆಲಸ ಆಗಬಾರದು ಎಂದು ಕಿವಿಮಾತು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.