ಲೇಟ್ ಆದರೂ, ಸರಿಯಾದ ನಿರ್ಧಾರ: ರಾಜ್ಯ BJP ಉಸ್ತುವಾರಿ ರಾಧಾ ಮೋಹನದಾಸ್ ಬದಲಾವಣೆಗೆ 2 ಕಾರಣ ನೀಡಿದ ಯತ್ನಾಳ್
ಬಿಜೆಪಿ ಹೈಕಮಾಂಡ್ ರಾಜ್ಯ ಉಸ್ತುವಾರಿಯಾಗಿದ್ದ ರಾಧಮೋಹನ್ ದಾಸ್ ಅಗರ್ವಾಲ್ ಅವರಿಗೆ ಕೊಕ್ ನೀಡಿ, ಹರೀಶ್ ದ್ವಿವೇದಿ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ನೇಮಕ ಮಾಡಿದೆ.

ಬೆಂಗಳೂರು: ಭಾರತೀಯ ಜನತಾ ಪಕ್ಷ(ಬಿಜೆಪಿ) ಬುಧವಾರ ತನ್ನ ರಾಜ್ಯ ಸಂಘಟನಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಘೋಷಿಸಿದ್ದು, ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಉಸ್ತುವಾರಿಗಳು ಹಾಗೂ ಸಹ-ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಬಿಜೆಪಿ ಹೈಕಮಾಂಡ್ ರಾಜ್ಯ ಉಸ್ತುವಾರಿಯಾಗಿದ್ದ ರಾಧಮೋಹನ್ ದಾಸ್ ಅಗರ್ವಾಲ್ ಅವರಿಗೆ ಕೊಕ್ ನೀಡಿ, ಹರೀಶ್ ದ್ವಿವೇದಿ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ನೇಮಕ ಮಾಡಿದೆ.
ರಾಧಮೋಹನ್ ದಾಸ್ ಅವರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಉಚ್ಚಾಟಿತ ಮತ್ತು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಲೇಟ್ ಆದರೂ, ಬಿಜೆಪಿ ಹೈಕಮಾಂಡ್ ನಿರ್ಧಾರ ಸರಿಯಾಗಿಯೇ ಇದೆ ಎಂದು ಹೇಳಿದ್ದಾರೆ.
ನನ್ನ ಪ್ರಕಾರ, ರಾಧಾ ಮೋಹನದಾಸ್ ಅವರನ್ನು ಬದಲಾಯಿಸಿರುವುದಕ್ಕೆ ಎರಡು ಕಾರಣಗಳು ಇರಬಹುದು ಎಂದು ಯತ್ನಾಳ್ ಅವರು ಹೇಳಿದ್ದಾರೆ.
ಲೇಟ್ ಆದರೂ, ಬಿಜೆಪಿ ಹೈಕಮಾಂಡ್ ನಿರ್ಧಾರ ಸರಿಯಾಗಿಯೇ ಇದೆ. ಅಧಿವೇಶನದ ಒಳಗೆ ಮತ್ತು ಹೊರಗೆ, ವಿಜಯೇಂದ್ರ ಹಾಗೂ ಆರ್.ಅಶೋಕ್ ನಡೆಸುತ್ತಿರುವ ಪ್ರತಿಭಟನೆಯು ಕೇವಲ ಐವಾಷ್, ಸಿಎಂ ಡಿಕೆ ಶಿವಕುಮಾರ್ ಅವರ ಅಣತಿಯಂತೆ ಇವರಿಬ್ಬರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವಿಜಯೇಂದ್ರ ಜೊತೆ ಅವರದ್ದು ಹೊಂದಾಣಿಕೆ ರಾಜಕೀಯ ನಡೆಯುತ್ತಿತ್ತು, ಅದಕ್ಕಾಗಿ ಬದಲಾವಣೆ ಮಾಡಿರಬಹುದು ಎಂದು ಯತ್ನಾಳ್ ಹೇಳಿದ್ದಾರೆ.
"ರಾಧಾ ಮೋಹನದಾಸ್ ಅಗರ್ವಾಲ್ ಅವರನ್ನು ಉಸ್ತುವಾರಿಯಿಂದ ಇಳಿಸಿರುವುದಕ್ಕೆ ಮೊದಲ ಕಾರಣ ನನ್ನ ಪ್ರಕಾರ, ಅವರು ಒನ್’ಸೈಡೆಡ್ ಆಗಿ ಕೆಲಸ ಮಾಡುತ್ತಿದ್ದರು. ಆರಂಭದಲ್ಲಿ ಅವರು ನ್ಯೂಟ್ರಲ್ ಆಗಿದ್ದರು, ಎಲ್ಲರ ಅಭಿಪ್ರಾಯವನ್ನು ಅವರು ಆಲಿಸುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಅವರು ಸಂಪೂರ್ಣವಾಗಿ ಯಡಿಯೂರಪ್ಪ ಕುಟುಂಬದ ಬೆಂಬಲಕ್ಕೆ ನಿಂತಿದ್ದರು. ಇದು ಬಿಜೆಪಿ ಕಾರ್ಯಕರ್ತರಿಗೆ ಮತ್ತು ಸಾಕಷ್ಟು ಮುಖಂಡರಿಗೆ ಬೇಸರವನ್ನು ತಂದೊಡ್ಡಿತ್ತು" ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಇನ್ನು ಎರಡನೇ ಕಾರಣ, ವಿಜಯೇಂದ್ರ ಪರವಾಗಿ, ರಾಧಾ ಮೋಹನದಾಸ್ ಕೆಲಸ ಮಾಡುತ್ತಿದ್ದಾರೆ ಎನ್ನುವ ಮಾತು, ಬಿಜೆಪಿ ವರಿಷ್ಠರಿಗೂ ತಲುಪಿರಬೇಕು, ಅದಕ್ಕಾಗಿ ಅವರನ್ನು ಬದಲಾಯಿಸಿರಬಹುದು ಎನ್ನುವುದು ನನ್ನ ಅಭಿಪ್ರಾಯ ಎಂದು ಯತ್ನಾಳ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



