ರಾಜಕೀಯ

'DKS ಎಂದರೆ ದುಡ್ಡೆಲ್ಲಾ ಖಾಲಿ ಶಿವಾ; ಕಾಂಗ್ರೆಸ್‌ ಸರ್ಕಾರ ಅಂದ್ರೆ ಖಾಲಿ ಖಜಾನೆ..! ಬುರುಡೆ ಭಾಷಣ!'

ರಾಜ್ಯ ಸರ್ಕಾರಕ್ಕೆ ಹಣಕಾಸು ಇಲಾಖೆ ನೀಡಿದ ಸಲಹೆ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ವಾಕ್ಸಮರ ಆರಂಭವಾಗಿದ್ದು, DKS ಎಂದರೆ ದುಡ್ಡೆಲ್ಲಾ ಖಾಲಿ ಶಿವಾ ಎಂದು ಬಿಜೆಪಿ ವ್ಯಂಗ್ಯವಾಡಿದೆ.

'DKS ಎಂದರೆ ದುಡ್ಡೆಲ್ಲಾ ಖಾಲಿ ಶಿವಾ; ಕಾಂಗ್ರೆಸ್‌ ಸರ್ಕಾರ ಅಂದ್ರೆ ಖಾಲಿ ಖಜಾನೆ..! ಬುರುಡೆ ಭಾಷಣ!'
ಬಿಜೆಪಿ ಪೋಸ್ಟ್
Published On :

ಬೆಂಗಳೂರು: ರಾಜ್ಯದಲ್ಲಿ ಬರಗಾಲ, ಗ್ಯಾರಂಟಿ ಯೋಜನೆಗಳ ನಡುವೆ 100 ದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಹಲವು ಸವಾಲುಗಳನ್ನು ಎದುರಿಸುತ್ತಿದ್ದು, ಯಾವುದೇ ಹೊಸ ಯೋಜನೆಗಳನ್ನು ಘೋಷಿಸದಂತೆ ಹಣಕಾಸು ಇಲಾಖೆ ಸಲಹೆ ನೀಡಿದೆ.

ರಾಜ್ಯ ಸರ್ಕಾರಕ್ಕೆ ಹಣಕಾಸು ಇಲಾಖೆ ನೀಡಿದ ಸಲಹೆ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ವಾಕ್ಸಮರ ಆರಂಭವಾಗಿದ್ದು, DKS ಎಂದರೆ ದುಡ್ಡೆಲ್ಲಾ ಖಾಲಿ ಶಿವಾ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ರಾಜ್ಯದ ಖಜಾನೆ ಖಾಲಿಯಾಗಿದ್ದು, ಇದಕ್ಕೆ ಡಿಕೆ ಶಿವಕುಮಾರ್‌ ಸರ್ಕಾರ ಆರ್ಥಿಕ ಹೊಣೆಗಾರಿಕೆಯನ್ನು ಸರಿಯಾಗಿ ನಿಭಾಯಿಸದೇ ಇರುವುದೇ ಕಾರಣ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, "DKS ಎಂದರೆ ದುಡ್ಡೆಲ್ಲಾ ಖಾಲಿ ಶಿವಾ, ಕಾಂಗ್ರೆಸ್‌ ಸರ್ಕಾರ ಅಂದ್ರೆ ಖಾಲಿ ಖಜಾನೆ..! ಬುರುಡೆ ಭಾಷಣ'!" ಎಂದು ವ್ಯಂಗ್ಯವಾಡಿದೆ.

DKS ಎಂದರೆ ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್‌ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಡಿಕೆಶಿ ಎಂದೇ ಪರಿಚಿತರು. ಆದರೆ ಬಿಜೆಪಿ ಅವರ ಹೆಸರಿನ ಅಕ್ಷರಗಳನ್ನು ಬಳಿಸಿ ವಾಗ್ದಾಳಿ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.