ರಾಜಕೀಯ

CEC ಜ್ಞಾನೇಶ್ ಕುಮಾರ್ ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್ ಅವಮಾನಿಸುತ್ತಿದೆ: ಗೋವಿಂದ ಕಾರಜೋಳ

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಗೋವಿಂದ ಕಾರಜೋಳ ಅವರು, ಜ್ಞಾನೇಶ್‌ ಕುಮಾರ್‌ ಅವರು ಒಬ್ಬ ದಲಿತ ಐಎಎಸ್‌ ಅಧಿಕಾರಿ ಎಂಬ ಕಾರಣಕ್ಕೆ ಕಾಂಗ್ರೆಸ್‌ ಅವರನ್ನು ಸಹಿಸಿಕೊಳ್ಳಲಾಗದೇ ಸಂವಿಧಾನಿಕ ಹುದ್ದೆಗೆ ಅವಮಾನ.

CEC ಜ್ಞಾನೇಶ್ ಕುಮಾರ್ ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್ ಅವಮಾನಿಸುತ್ತಿದೆ: ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
Published On :

ವಿಜಯಪುರ: ಚುನಾವಣಾ ಆಯೋಗದಲ್ಲಿನ ಭಿನ್ನಾಭಿಪ್ರಾಯ ಬಹಿರಂಗವಾದ ನಂತರ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು, ಬ್ರಿಟಿಷ್‌ ಪೌರತ್ವ ಹೊಂದಿರುವ ರಾಹುಲ್ ಗಾಂಧಿ ಅವರಿಗೆ ಅನರ್ಹನಾಗುತ್ತೇನೆ ಎಂಬ ಭಯ ಕಾಡುತ್ತಿದೆ ಎಂದರು.

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಗೋವಿಂದ ಕಾರಜೋಳ ಅವರು, ಜ್ಞಾನೇಶ್‌ ಕುಮಾರ್‌ ಅವರು ಒಬ್ಬ ದಲಿತ ಐಎಎಸ್‌ ಅಧಿಕಾರಿ ಎಂಬ ಕಾರಣಕ್ಕೆ ಕಾಂಗ್ರೆಸ್‌ ಅವರನ್ನು ಸಹಿಸಿಕೊಳ್ಳಲಾಗದೇ ಸಂವಿಧಾನಿಕ ಹುದ್ದೆಗೆ ಅವಮಾನ ಮಾಡಿ, ಕೆಳಗಿಳಿಸಲು ಹುನ್ನಾರ ನಡೆಸಿದೆ ಆರೋಪಿಸಿದರು.

ಈ ದೇಶದ ದಲಿತರು, ಅಲ್ಪ ಸಂಖ್ಯಾತರು ಒಬ್ಬ ದಲಿತ ಅಧಿಕಾರಿ ಜ್ಞಾನೇಶ್‌ ಕುಮಾರ್‌ ಅವರ ಬೆನ್ನಿಗೆ ನಿಲ್ಲಬೇಕು ಎಂದು ಕಾರಜೋಳ ಮನವಿ ಮಾಡಿದರು.

ಎಸ್ಐಆರ್ ವಿಷಯದಲ್ಲಿ ಕೋರ್ಟ್‌ ಅನ್ನು ಎದುರಿಸಲಾಗದೆ ಅವರು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ನಾಗರಿಕರನ್ನು ದಂಗೆ ಎಳುವಂತೆ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತ ಹುದ್ದೆ ಸಂವಿಧಾನಿಕ ಹುದ್ದೆ. ಈ ಹುದ್ದೆಯಲ್ಲಿದ್ದು ಯಾರಿಗೂ ಮೋಸ ಮಾಡಲು ಸಾಧ್ಯವಿಲ್ಲ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಜ್ಞಾನೇಶ್‌ ಕುಮಾರ್ ಕೆಲಸ ಮಾಡುತ್ತಿದ್ದಾರೆ ಎಂದರು.

ಜ್ಞಾನೇಶ್‌ ಕುಮಾರ್‌ ವಿಷಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಬೇಕು, ಕೇವಲ ರಾಹುಲ್‌ ಗಾಂಧಿ ಹೇಳಿಕೊಡುವ ಸುಳ್ಳುಗಳನ್ನು ಮಾತ್ರ ಮಾತನಾಡಬಾರದು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸುವ ಶಕ್ತಿ ಕಾಂಗ್ರೆಸ್‌ಗೆ ಇಲ್ಲ, ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ ಇದೆ. ಕಳೆದ 12 ವರ್ಷಗಳಿಂದ ಅಧಿಕಾರ ಇಲ್ಲದೇ ಹತಾಶರಾಗಿರುವ ಗಾಂಧಿ ಕುಟುಂಬದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ವಿದೇಶಿ ಶಕ್ತಿಗಳ ಜೊತೆ ಕೈಜೋಡಿಸಿ, ಈ ದೇಶದ ಉದ್ದಗಲಕ್ಕೂ ನಾಗರಿಕ ದಂಗೆ ಎಬ್ಬಿಸಬೇಕು, ಅರಾಜಕತೆ ಸೃಷ್ಟಿಸಲು ಪದೇ ಪದೇ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.