ನನಗೆ ಕಾಂಗ್ರೆಸ್ ಪಕ್ಷದ ಭವಿಷ್ಯವೇ ಮುಖ್ಯ; ಏನೇ ಭಿನ್ನಾಭಿಪ್ರಾಯಗಳಿದ್ದರೂ 4 ಗೋಡೆ ಮಧ್ಯೆ ಬಗೆಹರಿಸಿಕೊಳ್ಳುತ್ತೇವೆ: ಪ್ರದೀಪ್ ಈಶ್ವರ್
ಎಂ.ಸಿ ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ನಡುವೆ ಬಿನ್ನಾಭಿಪ್ರಾಯಗಳು ಕೇಳಿಬಂದ ಹಿನ್ನೆಲೆಯಲ್ಲೇ ಪ್ರದೀಪ್ ಈಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಏನೇ ಭಿನ್ನಾಭಿಪ್ರಾಯಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ, ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ. ನನಗೆ ನನ್ನ ಪಕ್ಷವೇ ಮುಖ್ಯ, ನನ್ನ ಕಾಂಗ್ರೆಸ್ ಪಕ್ಷದ ಭವಿಷ್ಯವೇ ಮುಖ್ಯ. ಕಾಂಗ್ರೆಸ್ ಪಾರ್ಟಿ ಕಚೇರಿಯಲ್ಲಿ ಕಸ ಗುಡಿಸಲು ನಾನು ಸಿದ್ಧ ಎಂದು ಅವರು ಹೇಳಿದ್ದಾರೆ.
ಎಂ.ಸಿ ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ನಡುವೆ ಬಿನ್ನಾಭಿಪ್ರಾಯಗಳು ಕೇಳಿಬಂದ ಹಿನ್ನೆಲೆಯಲ್ಲೇ ಪ್ರದೀಪ್ ಈಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಮ್ಮ ಕಾಂಗ್ರೆಸ್ ಪಕ್ಷವು 2028ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಮತ್ತು 2029ಕ್ಕೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು, ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಮಾಡಬೇಕು. ಇದು ನಮ್ಮ ಅತೀ ದೊಡ್ಡ ಜವಾಬ್ದಾರಿ.
ಏನೇ ಭಿನ್ನಾಭಿಪ್ರಾಯಗಳಿದ್ದರೂ, ನಾಲ್ಕು ಗೋಡೆಗಳ ಮಧ್ಯೆ ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ. ನನಗೆ ನನ್ನ ಪಕ್ಷವೇ ಮುಖ್ಯ. ನನ್ನ ಕಾಂಗ್ರೆಸ್ ಪಕ್ಷದ ಭವಿಷ್ಯವೇ ಮುಖ್ಯ. ಮತ್ತೊಮ್ಮೆ ಹೇಳುತ್ತಿದ್ದೇನೆ, ಕಾಂಗ್ರೆಸ್ ಪಕ್ಷದಲ್ಲಿ, ಕಾಂಗ್ರೆಸ್ ಪಾರ್ಟಿ ಕಚೇರಿಯಲ್ಲಿ ಕಸ ಗುಡಿಸಲೂ ನಾನು ಸಿದ್ಧವಿದ್ದೇನೆ.
ಜೈ ಕಾಂಗ್ರೆಸ್
ಜೈ ರಾಹುಲ್ ಗಾಂಧೀಜಿ ಎಂದು ಬರೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಎಂ.ಸಿ. ಸುಧಾಕರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ದೂರು ನೀಡಿದೆ.
ಶಾಸಕರ ಕಾರ್ಯವೈಖರಿ, ಪಕ್ಷ ಸಂಘಟನೆ, ಸ್ಥಳೀಯ ಚುನಾವಣೆಗಳು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ವಿಚಾರ ಸೇರಿದಂತೆ ಹಲವು ಅಂಶಗಳ ಬಗ್ಗೆ ನಿಯೋಗ ಅಹವಾಲು ಸಲ್ಲಿಸಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಾಯವನ್ನೂ ಮುಖಂಡರು ಮುಂದಿಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



