ರಾಜಕೀಯ

ಜೀವನದಲ್ಲಿ ಒಂದು ಎಲೆಕ್ಷನ್ ಗೆಲ್ಲೋಕೆ ಆಗಿಲ್ಲ; ಎಷ್ಟು ಚುನಾವಣೆಗಳಲ್ಲಿ ಮತದಾರರು ನಿಮ್ಮನ್ನು ಓಡಿಸಿದ್ದಾರೆ: ಹರಿಪ್ರಸಾದ್ ವಿರುದ್ಧ ವಿಜಯೇಂದ್ರ ಕಿಡಿ

ಬಿ.ಕೆ ಹರಿಪ್ರಸಾದ್‌ರವರು ಶಿಕಾರಿಪುರಕ್ಕೆ ಬರಲಿ, ಅವರಿಗೆ ಒಳ್ಳೆಯದು ಆಗಲಿ, ನಾನು ಅವರ ಪಾದಯಾತ್ರೆ ಸ್ವಾಗತ ಮಾಡುತ್ತೇನೆ ಎಂದು ಹೇಳಿದರು.

ಜೀವನದಲ್ಲಿ ಒಂದು ಎಲೆಕ್ಷನ್ ಗೆಲ್ಲೋಕೆ ಆಗಿಲ್ಲ; ಎಷ್ಟು ಚುನಾವಣೆಗಳಲ್ಲಿ ಮತದಾರರು ನಿಮ್ಮನ್ನು ಓಡಿಸಿದ್ದಾರೆ: ಹರಿಪ್ರಸಾದ್ ವಿರುದ್ಧ ವಿಜಯೇಂದ್ರ ಕಿಡಿ
ಬಿ ವೈ ವಿಜಯೇಂದ್ರ
Published On :

ಬೆಂಗಳೂರು: ಬಿಕೆ ಹರಿಪ್ರಸಾದ್‌ರವರ ಹಿನ್ನೆಲೆ ಏನೆಂದು ಎಲ್ಲರಿಗೂ ಗೊತ್ತಿದೆ. ನಿಮ್ಮ ಜೀವನದಲ್ಲೇ ಒಂದು ಚುನಾವಣೆ ಗೆಲ್ಲೋಕೆ ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ರವರಿಗೆ ನಮ್ಮ ಬಳ್ಳಾರಿ ಪಾದಯಾತ್ರೆ ಪ್ರೇರಣೆ ಕೊಟ್ಟಿದೆ. ರಾಜ್ಯ ಸರ್ಕಾರದ ಸೊಕ್ಕು ಅಡಗಿಸುವಲ್ಲಿ ನಮ್ಮ ಬಳ್ಳಾರಿ ಪಾದಯಾತ್ರೆ ಯಶಸ್ವಿಯಾಗಿದೆ. ನನ್ನ ಕ್ಷೇತ್ರದಲ್ಲೇ ಬಿ.ಕೆ ಹರಿಪ್ರಸಾದ್ ಪ್ರಾರಂಭ ಮಾಡುತ್ತೇನೆ ಎಂದಿದ್ದಾರೆ. ಅವರಿಗೆ ನಾನು ಯಾವುದೇ ರೀತಿಯ ತೊಂದರೆ ಕೊಡುವುದಿಲ್ಲ ಎಂದಿದ್ದಾರೆ.

ಯಡಿಯೂರಪ್ಪಗೆ ರಾಜಕೀಯ ಜನ್ಮಕೊಟ್ಟ ಕ್ಷೇತ್ರ ಶಿಕಾರಿಪುರ. ಅಲ್ಲಿ ಯಾವ ರೀತಿ ಅಭಿವೃದ್ಧಿ ಆಗಿದೆ ಎಂದು ಬಂದು ನೋಡಿಕೊಂಡು ಹೋಗಲಿ. ಡಿಕೆ ಶಿವಕುಮಾರ್ ಕ್ಷೇತ್ರ, ಮಲ್ಲಿಕಾರ್ಜುನ್ ಖರ್ಗೆ ಸೇರಿ ಕಾಂಗ್ರೆಸ್‌ನವರ ಕ್ಷೇತ್ರಗಳನ್ನು ನೋಡಲಿ. ಶಿಕಾರಿಪುರ ಮಣ್ಣಿನಲ್ಲೇ ಹೋರಾಟದ ಗುಣ ಇದೆ. ಶಿಕಾರಿಪುರದಲ್ಲಿ ಮುಂದೆ ಗೆಲ್ಲುತ್ತೇವೆ ಅಂತಿದ್ದಾರೆ. ಬಿ.ಕೆ.ಹರಿಪ್ರಸಾದ್‌ರವರ ಸವಾಲು ನಾನು ಸ್ವೀಕಾರ ಮಾಡುತ್ತೇನೆ ಎಂದರು.

ಬಿ.ಕೆ ಹರಿಪ್ರಸಾದ್‌ರವರು ಶಿಕಾರಿಪುರಕ್ಕೆ ಬರಲಿ, ಅವರಿಗೆ ಒಳ್ಳೆಯದು ಆಗಲಿ, ನಾನು ಅವರ ಪಾದಯಾತ್ರೆ ಸ್ವಾಗತ ಮಾಡುತ್ತೇನೆ ಎಂದು ಹೇಳಿದರು. ಬೆಂಗಳೂರಿನಿಂದ ಆರ್‌ಎಸ್‌ಎಸ್ ಮತ್ತೆ ಬಿಜೆಪಿಯವರನ್ನು ಓಡಿಸುವ ಬಗ್ಗೆ ಬಿ.ಕೆ ಹರಿಪ್ರಸಾದ್ ಹೇಳಿಕೆ ವಿಚಾರಕ್ಕೂ ವ್ಯಂಗ್ಯವಾಡಿದ ವಿಜಯೇಂದ್ರ, ಬಿ.ಕೆ ಹರಿಪ್ರಸಾದ್‌ರನ್ನು ಎಷ್ಟು ಬಾರಿ ಚುನಾವಣೆಗಳಲ್ಲಿ ಮತದಾರರು ಓಡಿಸಿದ್ದಾರೆಂದು ಗೊತ್ತಿದೆ ಎಂದು ಕೌಂಟರ್ ಕೊಟ್ಟರು.

ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ, ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಾಗ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದ ವಿರುದ್ಧ ಯಾವುದೇ ಆರೋಪಗಳನ್ನು ಮಾಡಿರಲಿಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ಸಾಂವಿಧಾನಿಕ ಸಂಸ್ಥೆಗಳ ಘನತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಕಳಂಕರಹಿತವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಗುರಿಯಾಗಿಸುತ್ತಿದೆ ಎಂದು ಅವರು ದೂರಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಶ್ವೇತಪತ್ರ ಬಿಡುಗಡೆ ಮಾಡುವಂತೆ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಒತ್ತಾಯಿಸಿದರು. 'ಗ್ಯಾರಂಟಿ' ಯೋಜನೆಗಳಿಂದಾಗಿ ಆರ್ಥಿಕ ಹೊರೆ ಉಂಟಾಗಿರುವುದನ್ನು ಮುಖ್ಯಮಂತ್ರಿ ಮತ್ತು ಹಲವು ಸಚಿವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ ಅವರು, ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ಬಾಕಿ ಇರುವುದನ್ನು ಸಚಿವರು ಒಪ್ಪಿಕೊಂಡಿದ್ದಾರೆ ಹಾಗೂ ಹಣಕಾಸು ಇಲಾಖೆಯ ಪತ್ರವೊಂದು ಆರ್ಥಿಕ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.