ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಕೋವಿಡ್ ಮತ್ತು ಪ್ರವಾಹ ನಿರ್ವಹಣೆಗೆ ನಿಯೋಜಿಸಿದ್ದ ಸಚಿವರಿಗೆ ಈಗ ಪರಿಷತ್ ಚುನಾವಣೆ ಪ್ರಚಾರದ ಜವಾಬ್ದಾರಿ!ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿವಿಧ ಜಿಲ್ಲೆಗಳಿಗೆ ನಿಯೋಜಿಸಲಾದ ಸಚಿವರು ಈಗ ಎಂಎಲ್ಸಿ ಚುನಾವಣೆಗೆ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಿಎಸ್ವೈ, ಹೆಚ್ಡಿಕೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ: ಸಿಎಂ ಬೊಮ್ಮಾಯಿಡಿಸೆಂಬರ್ 10 ರಂದು ನಡೆಯಲಿರುವ ಎಂಎಲ್ಸಿ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ (ಜಾತ್ಯತೀತ) ನಡುವೆ ಚುನಾವಣಾ ಪೂರ್ವ ಮೈತ್ರಿ ಕುರಿತು ಪಕ್ಷದ ಹಿರಿಯ ನಾಯಕರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.
ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದು, ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಎಂದು ಪ್ರಶ್ನಿಸಿದ್ದಾರೆ.
ಡಿ.10ರ ಬಳಿಕ ರಾಜ್ಯ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ: ಯತ್ನಾಳ್ ಹೊಸ ಬಾಂಬ್ಡಿ.10ರ ಬಳಿಕ ಸಚಿವ ರಾಜ್ಯ ಸಂಪುಟದಲ್ಲಿ ಭಾರೀ ಬದಲಾವಣೆಯಾಗಲಿದೆ. ಆದರೆ, ಮುಖ್ಯಮಂತ್ರಿ ಬದಲಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಗೆಲ್ಲುವ ಕ್ಷೇತ್ರದ ಟಿಕೆಟ್ ಕುಟುಂಬಕ್ಕೆ; ಸೋಲುವ ಕಡೆ ಅನ್ಯರಿಗೆ: ಪ್ರಧಾನಿ ಮೋದಿ ಜೊತೆ ದೇವೇಗೌಡರು ಈಗ ಭಾಯಿ ಭಾಯಿ!ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಭೇಟಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮಾಜಿ-ಹಾಲಿ ಪ್ರಧಾನ ಮಂತ್ರಿಗಳು ಕೈ ಕೈ ಹಿಡಿದು ದೆಹಲಿಯಲ್ಲಿ ಮಾತನಾಡಿಕೊಂಡದ್ದೇನು, ಭೇಟಿ ಹಿಂದೆ ಇದೆಯೇ ಗೇಮ್ ಪ್ಲ್ಯಾನ್?ಈ ಹಿಂದಿನ ಕೆಲವು ಚುನಾವಣೆಗಳಲ್ಲಿ ಹಾಗೂ ಡಿಸೆಂಬರ್ 10ರ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ದ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡುತ್ತಿರುವುದು ನೋಡಿದರೆ 2023ರ ವಿಧಾನಸಭೆ ಚುನಾವಣೆಗೆ ಬಹುದೊಡ್ಡ ಮಟ್ಟದಲ್ಲಿ ರಾಜಕೀಯ ಲೆಕ್ಕಾಚಾರ, ಗೇಮ್ ಪ್ಲ್ಯಾನ್ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್ ಜತೆ ಸರ್ಕಾರ ರಚಿಸಿದ್ದು ಭಾಯಿ ಭಾಯಿ ಅಲ್ಲವೇ? ರಾಜ್ಯ ಕಂಡ ಅನುಕೂಲ ಸಿಂಧು ರಾಜಕಾರಣಿ ಅಂತಿದ್ದರೆ, ಅದು ಸಿದ್ದರಾಮಯ್ಯ!ಇತ್ತೀಚೆಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ವಿಷಯಕ್ಕೆ ಸಂಬಂದಿಸಿದಂತೆ ಸಿದ್ದರಾಮಯ್ಯ ಮಾಡಿರುವ ಲೇವಡಿಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
NonSense ಪ್ರಧಾನಿ ಭೇಟಿ ಮಾಡಲು ಅನುಮತಿ ಬೇಕೆ: ಸಿದ್ದರಾಮಯ್ಯನಿಗೆ ನನ್ನ ಪಕ್ಷವನ್ನು ಸರಂಡರ್ ಮಾಡಿದ್ದೀವಾ?ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಅನುಮತಿ ಬೇಕೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.
ವಾರ್ ಆದ್ರೂ ಚಿಂತೆಯಿಲ್ಲ, ಡಿಸೆಂಬರ್ 14 ರ ನಂತರ ಡಿಕೆಶಿಗೆ ನಾನು ಏನೆಂಬುದನ್ನು ತೋರಿಸುತ್ತೇನೆ: ರಮೇಶ್ ಜಾರಕಿಹೊಳಿವಾರ್ ಆದ್ರೂ ಚಿಂತೆಯಿಲ್ಲ. ಡಿಸೆಂಬರ್ 14ಕ್ಕೆ ನಾನು ಏನೆಂಬುದನ್ನು ತೋರಿಸುತ್ತೀನೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!