ವಿಶೇಷ ಸಾರಿಗೆ ವ್ಯವಸ್ಥೆ, ಉಚಿತ ಪ್ರಯಾಣ
81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರ ಅನುಕೂಲಕ್ಕಾಗಿ ಕರ್ನಾಟಕ..

ಹಾಸನ: 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ.
ಹಾಸನ ವಿಭಾಗದ 40 ಬಸ್ಗಳನ್ನು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೀಡಲಾಗಿದೆ. ಈ ಪೈಕಿ 10 ಬಸ್ಗಳು ಹಾಸನದಿಂದ ಶ್ರವಣಬೆಳಗೊಳಕ್ಕೆ ನೇರವಾಗಿ ಸಂಚರಿಸಲಿವೆ. ಇನ್ನುಳಿದ 30 ಸಾರಿಗೆ ಬಸ್ಗಳನ್ನು ನಾನಾ ಮಾರ್ಗಗಳ ಮೂಲಕ ಶ್ರವಣಬೆಳಗೊಳಕ್ಕೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಬಸ್ಗಳಿಗೆ ಮಾರ್ಗಗಳನ್ನು ಸೂಚಿಸಲಾಗಿದೆ.
ಇದಲ್ಲದೆ ಇತರೆ ತಾಲೂಕುಗಳಲ್ಲಿ ಇರುವ ಸಾಹಿತ್ಯಾಭಿಮಾನಿಗಳಿಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳ ಡಿಪೋಗಳಿಂದ ತಲಾ 5 ಬಸ್ಗಳನ್ನು ಸಾಹಿತ್ಯ ಸಮ್ಮೇಳನ ನಡೆಯುವ ಶ್ರವಣಬೆಳಗೊಳಕ್ಕೆ ಸೌಕರ್ಯ ಕಲ್ಪಿಸಲಾಗಿದೆ. ಚನ್ನರಾಯಪಟ್ಟಣ ಹಾಗೂ ಹಿರೇಸಾವೆಯಿಂದ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಲಾಗಿದೆ.
ಉಚಿತ ಪ್ರಯಾಣ
ಶ್ರವಣಬೆಳಗೊಳ ಬಸ್ ನಿಲ್ದಾಣದಿಂದ ಸಾಹಿತ್ಯ ಸಮ್ಮೇಳನದ ವೇದಿಕೆಯವರೆಗೆ ಸಂಚರಿಸುವ ಬಸ್ಗಳಲ್ಲಿ ಪ್ರಯಾಣ ಉಚಿತ. ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಮುಂಗಡವಾಗಿ ಹಣ ನೀಡಲಾಗಿದೆ. ಜಿಲ್ಲೆಯಲ್ಲದೇ ಹೊರ ಜಿಲ್ಲೆಗಳಿಂದ ಶ್ರವಣಬೆಳಗೊಳಕ್ಕೆ ಆಗಮಿಸುವಂತಹ ಜನರ ಅನುಕೂಲಕ್ಕಾಗಿ ಶ್ರವಣಬೆಳಗೊಳ ಬಸ್ ನಿಲ್ದಾಣದಿಂದ ಸಮ್ಮೇಳನ ನಡೆಸುವಂತಹ ಸ್ಥಳಕ್ಕೆ ಜನರು ಹೋಗಲು ಪ್ರತ್ಯೇಕವಾಗಿ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


