ಭಾರತ ಸರ್ಕಾರದಿಂದ ಹೊಸ ಆಪರೇಟಿಂಗ್ ಸಿಸ್ಟಂ ಅಭಿವೃದ್ಧಿ
ಭಾರತ ಸರ್ಕಾರ ಹೊಸ ಆಪರೇಟಿಂಗ್ ಸಿಸ್ಟಮ್ ನ್ನು ಬಿಡುಗಡೆ ಮಾಡಲಿದೆ.

ನವದೆಹಲಿ: ಭಾರತ ಸರ್ಕಾರ ಹೊಸ ಆಪರೇಟಿಂಗ್ ಸಿಸ್ಟಮ್ ನ್ನು ಮುಂದಿನ ವಾರ ಬಿಡುಗಡೆ ಮಾಡಲಿದೆ. ಆಪರೇಟಿಂಗ್ ಸಿಸ್ಟಂ ಗೆ ಭಾರತ್ ಆಪರೇಟಿಂಗ್ ಸಿಸ್ಟಂ ಸಲ್ಯೂಷನ್ಸ್ ಅಥವಾ ಬಿಒಎಸ್ಎಸ್(ಬಾಸ್) ಎಂದು ಹೆಸರಿಡಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಮೈಕ್ರೋಸಾಫ್ಟ್ ವಿಂಡೊಸ್ ಆಪರೇಟಿಂಗ್ ಸಿಸ್ಟಂ ಬದಲಿಗೆ ಬಳಕೆ ಮಾಡುವುದಕ್ಕಾಗಿ ಭಾರತ ಸರ್ಕಾರ ತನ್ನದೇ ಆದ ಆಪರೇಟಿಂಗ್ ಸಿಸ್ಟಂ ನ್ನು ಬಿಡುಗಡೆ ಮಾಡಲಿದೆ. ಹೊಸ ಒ.ಎಸ್ ನ್ನು ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಅಭಿವೃದ್ಧಿ ಕೇಂದ್ರದಿಂದ ಅಭಿವೃದ್ಧಿಪಡಿಸಲಾಗಿದೆ.
ಭಾರತ್ ಆಪರೇಟಿಂಗ್ ಸಿಸ್ಟಂ ಲೈನಕ್ಸ್ ಆಧಾರಿತವಾಗಿದ್ದು ಗುಜರಾತ್ ತಾಂತ್ರಿಕ ವಿಶ್ವವಿದ್ಯಾನಿಲಯ, ಡಿಆರ್.ಡಿ.ಒ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. 2013 ರಲ್ಲಿ ಬಾಸ್ ನ್ನು ಅಭಿವೃದ್ಧಿಪಡಿಸಲಾಗಿತ್ತು. ಹಲವು ಬದಲಾವಣೆಗಳೊಂದಿಗೆ ಈಗ ಮತ್ತೊಮ್ಮೆ ಬಿಡುಗಡೆ ಮಾಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


