ಗ್ಯಾಲಕ್ಸಿ ನೋಟ್ 7 ಮೊಬೈಲ್ ಉತ್ಪಾದನೆ ತಾತ್ಕಾಲಿಕ ಸ್ಥಗಿತಗೊಳಿಸಲು ಸ್ಯಾಮ್ ಸಂಗ್ ನಿರ್ಧಾರ
ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ಸ್ಯಾಮ್ ಸಂಗ್ ತನ್ನ ಗ್ಯಾಲಕ್ಸಿ ನೋಟ್ 7 ಸರಣಿಯ ಮೊಬೈಲ್ ಗಳ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗತಗೊಳಿಸಲು ನಿರ್ಧರಿಸಿದೆ ಎಂಬ ವರದಿಗಳು ಪ್ರಕಟವಾಗಿದೆ.

ಸಿಯೋಲ್: ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ಸ್ಯಾಮ್ ಸಂಗ್ ತನ್ನ ಗ್ಯಾಲಕ್ಸಿ ನೋಟ್ 7 ಸರಣಿಯ ಮೊಬೈಲ್ ಗಳ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗತಗೊಳಿಸಲು ನಿರ್ಧರಿಸಿದೆ ಎಂಬ ವರದಿಗಳು ಪ್ರಕಟವಾಗಿದೆ.
ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ದೋಷದಿಂದ ಸ್ಫೋಟಗೊಂಡ ಪ್ರಕರಣಗಳು ಹೆಚ್ಚುತ್ತಿದ್ದು, ಸ್ಫೋಟಗೊಂಡ ಮೊಬೈಲ್ ಗಳ ಬದಲಿಗೆ ಗ್ರಾಹಕರಿಗೆ ನೀಡಲಾಗಿದ್ದ ಹೊಸ ಮೊಬೈಲ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಂಸ್ಥೆ ಗ್ಯಾಲಕ್ಸಿ ನೋಟ್ 7 ಸರಣಿಯ ಮೊಬೈಲ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ.
ಗ್ರಾಹಕರ ಭದ್ರತೆ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ದಕ್ಷಿಣ ಕೊರಿಯಾದಲ್ಲಿ ಆಗಸ್ಟ್ 19 ರಿಂದ ನೋಟ್ 7 ಸರಣಿಯ ಮೊಬೈಲ್ ಗಳ ಮಾರಾಟವನ್ನು ಪ್ರಾರಂಭಿಸಲಾಗಿತ್ತು. ಈಗ ತಾಂತ್ರಿಕ ದೋಷ ಕಂಡುಬಂದಿರ್ಯ್ವ ಹಿನ್ನೆಲೆಯಲ್ಲಿ 2.5 ಮಿಲಿಯನ್ ಯುನಿಟ್ ಗಳನ್ನು ವಾಪಸ್ ಪಡೆದು, ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ. ಸ್ಫೋಟಗೊಂಡ ಮೊಬೈಲ್ ಗಳ ಬದಲಾಗಿ ಗ್ರಾಹಕರಿಗೆ ನೀಡಲಾಗಿದ್ದ ಮೊಬೈಲ್ ಗಳು ಸಹ ಯುಎಸ್ ವಿಮಾನದಲ್ಲಿ ಸ್ಫೋಟಗೊಂಡ ಬಗ್ಗೆ ವರದಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


