ಇಸ್ರೋ ಮೈಲಿಗಲ್ಲು: ಬಹು ನಿರೀಕ್ಷಿತ ಜಿಎಸ್ಎಲ್ವಿ ಮಾರ್ಕ್ 3 ಉಡಾವಣೆ ಯಶಸ್ವಿ
ಭಾರತೀಯ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಮೈಲಿಗಲ್ಲು ಎಂದೇ ಹೇಳಲಾಗುತ್ತಿದ್ದ ಜಿಎಸ್ ಎಲ್ ವಿ ಮಾರ್ಕ್ 3 ರಾಕೆಟ್ ಅನ್ನು ಸೋಮವಾರ ಸಂಜೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಮೈಲಿಗಲ್ಲು ಎಂದೇ ಹೇಳಲಾಗುತ್ತಿದ್ದ ಜಿಎಸ್ ಎಲ್ ವಿ ಮಾರ್ಕ್ 3 ರಾಕೆಟ್ ಅನ್ನು ಸೋಮವಾರ ಸಂಜೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಲ್ಲಿ ಜಿಎಸ್ ಎಲ್ ವಿ ಮಾರ್ಕ್ 3 ಬೃಹತ್ ನೌಕೆಯನ್ನುಸ ಇಂದು ಸಂಜೆ 5.28ರ ವೇಳೆಯಲ್ಲಿ ಉಡಾವಣೆ ಮಾಡಲಾಗಿದ್ದು, ನೌಕೆಯು ಜಿಸ್ಯಾಟ್-19 ಉಪಗ್ರಹವನ್ನು ಹೊತ್ತು ಸಾಗಿದೆ.
ಭಾರತೀಯ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಕನಸಿನ ಯೋಜನೆಯಾಗಿರುವ ಮಾನವ ಸಹಿತ ಬಾಹ್ಯಾಕಾಶಯಾನಕ್ಕೆ ಈ ಬೃಹತ್ ನೌಕೆ ಅನುವು ಮಾಡಿಕೊಡಲಿದ್ದು, ಇದೇ ಕಾರಣಕ್ಕೆ ಇಂದಿನ ಉಡಾವಣೆ ಪ್ರಾಮುಖ್ಯತೆ ಪಡೆದಿದೆ. ಮಾನವಸಹಿತ ಬಾಹ್ಯಾಕಾಶ ಯಾನಕ್ಕಾಗಿ ಈ ಬೃಹತ್ ರಾಕೆಟ್ ಅನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅಭಿವೃದ್ಧಿಪಡಿಸಿದ್ದು, ಇದು ಈ ವರೆಗೆ ಇಸ್ರೋ ಅಭಿವೃದ್ಧಿ ಪಡಿಸಿದ ರಾಕೆಟ್ ಗಳಲ್ಲೇ ಅತ್ಯಂತ ತೂಕದ ಮತ್ತು ಬೃಹತ್ ರಾಕೆಟ್ ಎಂಬ ಖ್ಯಾತಿಗೆ ಒಳಗಾಗಿದೆ.
ನೌಕೆಯ ಯಶಸ್ವಿಯೊಂದಿಗೆ ಭಾರತ ಬೃಹತ್ ಉಡಾವಣಾ ನೌಕೆಗಳನ್ನು ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಪಟ್ಟಿಗೆ ಸೇರಿದ್ದು, ಈ ಹಿಂದೆ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳ ಬಳಿಕ ಭಾರತ ಕೂಡ ಪಟ್ಟಿಗೆ ಸೇರ್ಪಡೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


