ಶೀಘ್ರವೇ ಬೆಂಗಳೂರಿನಲ್ಲಿ "ಆಪಲ್" ತಯಾರಿಕೆ
ಬಹುನಿರೀಕ್ಷಿತ ಆಪಲ್ ಫೋನ್ ತಯಾರಿಕೆ ಯೋಜನೆ ಜರಿಗೆ ಬರುತ್ತಿದ್ದು, ಬೆಂಗಳೂರಿನಲ್ಲಿ ಶೀಘ್ರವೇ ಐಫೋನ್ ಎಸ್ಇ ತಯಾರಿಕೆ ಪ್ರಾರಂಭವಾಗಲಿದೆ.

Published On :
ಬೆಂಗಳೂರು: ಬಹುನಿರೀಕ್ಷಿತ ಆಪಲ್ ಫೋನ್ ತಯಾರಿಕೆ ಯೋಜನೆ ಜರಿಗೆ ಬರುತ್ತಿದ್ದು, ಬೆಂಗಳೂರಿನಲ್ಲಿ ಶೀಘ್ರವೇ ಐಫೋನ್ ಎಸ್ಇ ತಯಾರಿಕೆ ಪ್ರಾರಂಭವಾಗಲಿದೆ.
ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಸರಣಿ ಸಭೆಗಳು ನಡೆದ ಬಳಿಕ ಐಫೋನ್ ಎಸ್ಇ ತಯಾರಿಕೆ ಬೆಂಗಳೂರಿನಲ್ಲಿ ಪ್ರಾರಂಭವಾಗುತ್ತಿದೆ. ಫೆಬ್ರವರಿಯಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದ ಐಟಿ ಹಾಗೂ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಏಪ್ರಿಲ್ ತಿಂಗಳಾಂತ್ಯಕ್ಕೆ ಐಫೋನ್ ತಯಾರಿಕೆ ಪ್ರಾರಂಭವಾಗಲಿದೆ ಎಂದಿದ್ದರು.
ಆಪಲ್ ಐ ಫೋನ್ ತಯಾರಿಗೆ ನಮ್ಮ ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತದೆ. ಆಪಲ್ ತಯಾರಿಕೆ ಯೋಜನೆಯನ್ನು ಪಡೆಯಲು ರಾಜ್ಯಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದರೆ ಆಪಲ್ ಸಂಸ್ಥೆ ಕರ್ನಾಟಕವನ್ನು ಆಯ್ಕೆ ಮಾಡಿರುವುದು ರಾಜ್ಯದ ಹೂಡಿಕೆ ಆಕರ್ಷಣೆಯನ್ನು ಮತ್ತಷ್ಟು ಹೆಚ್ಚಿಸಿದೆ, ಆಪಲ್ ನ ಯೋಜನೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಿದ್ದು, ಹೊಸ ಸಂಶೋಧನೆಗೆ ದಾರಿ ಮಾಡಿಕೊಡಲಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಆರ್ ವಿ ದೇಶಪಾಂಡೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


