ಭಾರತದ ದೇಸಿ ನಿರ್ಮಿತ ಸಬ್‍ಸೋನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆಗೆ ಸಿದ್ಧ
2016 ರ ಡಿಸೆಂಬರ್ ನಲ್ಲಿ ನಡೆದ ಪರೀಕ್ಷೆಯಲ್ಲಿ ವಿಫಲಗೊಂಡಿದ್ದ ದೇಸಿ ನಿರ್ಮಿತ ಸಬ್ ಸೋನಿ ಕ್ರೂಸ್ ಕ್ಷಿಪಣಿ ನಿರ್ಭಯ್ 5 ನೇ ಪರೀಕ್ಷೆಗೆ ಸಜ್ಜುಗೊಂಡಿದೆ.

Published On :
ನವದೆಹಲಿ: 2016 ರ ಡಿಸೆಂಬರ್ ನಲ್ಲಿ ನಡೆದ ಪರೀಕ್ಷೆಯಲ್ಲಿ ವಿಫಲಗೊಂಡಿದ್ದ ದೇಸಿ ನಿರ್ಮಿತ ಸಬ್ ಸೋನಿ ಕ್ರೂಸ್ ಕ್ಷಿಪಣಿ ನಿರ್ಭಯ್ 5 ನೇ ಪರೀಕ್ಷೆಗೆ ಸಜ್ಜುಗೊಂಡಿದೆ.
ಮುಂದಿನ ವಾರ ಕ್ಷಿಪಣಿಯ ಪರೀಕ್ಷೆ ನಡೆಸುವುದಕ್ಕೆ ಚಿಂತನೆ ನಡೆಸುತ್ತಿದ್ದೇವೆ ಎಂದು ಡಿಆರ್ ಡಿಒ ಮುಖ್ಯಸ್ಥ ಎಸ್ ಕ್ರಿಸ್ಟೊಫೋರ್ ತಿಳಿಸಿದ್ದಾರೆ. ಮೂರು ದಿನಗಳ ಅಂತಾರಾಷ್ಟ್ರೀಯ ಫಿಪ್ಸ್ಫಿಸಿಕಾನ್-2017 ಸಮ್ಮೇಳನದ ಪಾರ್ಶ್ವದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ಹಿಂದಿನ ಪರೀಕ್ಷೆ ವೇಳೆಯಲ್ಲಿ ವಿಫಲವಾಗುವುದಕ್ಕೆ ಕಾರಣವಾಗಿದ್ದ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಡಿಆರ್ ಡಿಒ ಮುಖ್ಯಸ್ಥರು ತಿಳಿಸಿದ್ದಾರೆ.
ನಿರ್ಭಯ್ ಕ್ಷಿಪಣಿ ದೇಶೀಯವಾಗಿ ನಿರ್ಮಿಸಿದ ಮೊದಲ ದೂರಗಾಮಿ ಖಂಡಾಂತರ ಕ್ಷಿಪಣಿಯಾಗಿದ್ದು, 2004ರಲ್ಲಿ ಸುಮಾರು 48 ಕೋಟಿ ರು.ಗಳ ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಹಿಂದೆ ನಡೆದ ಸತತ ನಾಲ್ಕು ಪರೀಕ್ಷೆಗಳಲ್ಲೂ ಕ್ಷಿಪಣಿ ವಿಫಲವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


