ಮಾನವ ಸಹಿತ ಬಾಹ್ಯಾಕಾಶ ಪಯಣ ಮತ್ತಷ್ಟು ಸನಿಹ; ಇಸ್ರೋ ಪರೀಕ್ಷೆ ಯಶಸ್ವಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಕನಸಿನ ಯೋಜನೆ 'ಮಾನವ ಸಹಿತ ಬಾಹ್ಯಾಕಾಶ ಪಯಣ' ಮತ್ತಷ್ಟು ಸನಿಹವಾಗಿದ್ದು, ಇಸ್ರೋ ನಡೆಸಿದ ಪರೀಕ್ಷೆ ಅಭೂತಪೂರ್ವ ಯಶಸ್ಸು ಸಾಧಿಸಿದೆ.

Published On :
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಕನಸಿನ ಯೋಜನೆ 'ಮಾನವ ಸಹಿತ ಬಾಹ್ಯಾಕಾಶ ಪಯಣ' ಮತ್ತಷ್ಟು ಸನಿಹವಾಗಿದ್ದು, ಇಸ್ರೋ ನಡೆಸಿದ ಪರೀಕ್ಷೆ ಅಭೂತಪೂರ್ವ ಯಶಸ್ಸು ಸಾಧಿಸಿದೆ.
ಭವಿಷ್ಯದಲ್ಲಿ ಮಾನವರನ್ನು ಬಾಹ್ಯಕಾಶಕ್ಕೆ ಕಳುಹಿಸುವ ಸಾಮರ್ಥ್ಯ ಬೆಳೆಸಿಕೊಳ್ಳಲು ಮುಂದಾಗಿರುವ ಇಸ್ರೋ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು ಮಾನವರನ್ನು ಹೊತ್ತ ಕ್ಯಾಪ್ಸೂಲ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಬಾಹ್ಯಾಕಾಶ ಪಯಣದ ವೇಳೆ ತುರ್ತುಪರಿಸ್ಥಿತಿಯಲ್ಲಿ ತುರ್ತು ನಿರ್ಗಮನ ಮಾಡುವುದು ಹೇಗೆ ಎಂಬ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಲ್ಲಿ ಇಸ್ರೋ ಈ ಪರೀಕ್ಷೆ ಮಾಡಿದ್ದು, ನಿರೀಕ್ಷೆಯಂತೆಯೇ ಕ್ಯಾಪ್ಸುಲ್ ಉಡಾವಣಾ ವಾಹಕದಿಂದ ಬೇರ್ಪಟ್ಟು ಪ್ಯಾರಾಚೂಟ್ ಗಳ ಮೂಲಕ ಸುರಕ್ಷಿತವಾಗಿ ಭೂಮಿಗೆ ಇಳಿದಿದೆ.
ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾದ ಬಳಿಕ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ ಶಿವನ್, 'ಸಿಬ್ಬಂದಿ ಹೊತ್ತೊಯ್ಯಬಲ್ಲ ಕ್ಯಾಪ್ಸೂಲ್ ಅನ್ನು ರಾಕೆಟ್ ಇಂಜಿನ್‌ಗೆ ಜೋಡಣೆ ಮಾಡಿ ಉಡಾವಣೆ ಮಾಡಲಾಯಿತು. ಕೆಲವೇ ಕ್ಷಣಗಳಲ್ಲಿ ರಾಕೆಟ್‌ನಿಂದ ಬೇರ್ಪಟ್ಟ ಕ್ಯಾಪ್ಸೂಲ್ ಅನ್ನು ಪ್ಯಾರಾಚೂಟ್ ಮೂಲಕ ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಲಾಯಿತು. ಈ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ. 259 ಸೆಕೆಂಡ್‌ಗಳ ಕಾಲ ನಡೆದ ಪರೀಕ್ಷೆಯ ಯಶಸ್ವಿನೊಂದಿಗೆ ಮುಂದಿನ ದಿನಗಳಲ್ಲಿ ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಹಾದಿ ಇನ್ನಷ್ಟು ಸುಗಮವಾಗಿದೆ. ಮಿಶನ್ ಸಂದರ್ಭ ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ ಕ್ಯಾಪ್ಸೂಲ್ ಒಳಗಿನ ಸಿಬ್ಬಂದಿಯನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ನಿಟ್ಟಿನಲ್ಲಿ ನಡೆಸಿದ ಮೊದಲ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiindiaಭಾರತISROಇಸ್ರೋscience and technologyವಿಜ್ಞಾನ ಮತ್ತು ತಂತ್ರಜ್ಞಾನSpace Crew Escape Systemಬಾಹ್ಯಾಕಾಶ ಸಿಬ್ಬಂದಿ ತುರ್ತು ನಿರ್ಗಮನ ವ್ಯವಸ್ಥೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


