ವಿಜ್ಞಾನ-ತಂತ್ರಜ್ಞಾನ

ಫೇಸ್ ಬುಕ್ ಖಾತೆಯನ್ನು ಅಳಿಸಿಹಾಕಲು ಸೂಕ್ತ ಸಮಯವಿದು: ವಾಟ್ಸಾಪ್ ಸಹ ಸ್ಥಾಪಕ

ಸಾಮಾಜಿಕ ಮಾಧ್ಯಮ ಫೇಸ್ ಬುಕ್ ಬಳಕೆದಾರರ ಖಾಸಗಿ ದಾಖಲೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ...

ಫೇಸ್ ಬುಕ್ ಖಾತೆಯನ್ನು ಅಳಿಸಿಹಾಕಲು ಸೂಕ್ತ ಸಮಯವಿದು: ವಾಟ್ಸಾಪ್ ಸಹ ಸ್ಥಾಪಕ
ವಾಟ್ಸಾಪ್ ಸಹ ಸಂಸ್ಥಾಪಕ ಬ್ರಿಯಾನ್ ಆಕ್ಟನ್
Published On :

ನ್ಯೂಯಾರ್ಕ್: ಸಾಮಾಜಿಕ ಮಾಧ್ಯಮ ಫೇಸ್ ಬುಕ್ ಬಳಕೆದಾರರ ಖಾಸಗಿ ದಾಖಲೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಆರೋಪ, ಅನುಮಾನಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಾಟ್ಸಾಪ್ ಸಾಮಾಜಿಕ ಮಾಧ್ಯಮದ ಸಹ ಸ್ಥಾಪಕ ಬ್ರಿಯಾನ್ ಆಕ್ಟನ್, ಎಲ್ಲರೂ ಫೇಸ್ ಬುಕ್ ನಿಂದ ತಮ್ಮ ಖಾತೆಗಳನ್ನು ಅಳಿಸಬೇಕೆಂದು ಹೇಳಿದ್ದಾರೆ.

ಆಕ್ಟನ್ ಅವರ ಉತ್ಪನ್ನವನ್ನು 2014ರಲ್ಲಿ ಫೇಸ್ ಬುಕ್ 16 ಶತಕೋಟಿ ಡಾಲರ್ ಗೆ ಖರೀದಿಸಿತ್ತು. ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಅವರು, ಇದು ಫೇಸ್ ಬುಕ್ ನಿಂದ ಖಾತೆಯನ್ನು ಅಳಿಸಿಹಾಕುವ ಸಮಯ. ಕೇಂಬ್ರಿಡ್ಜ್ ಅನಾಲಿಟಿಕಾದ ಖಾಸಗಿ ದಾಖಲೆಗಳು ದುರುಪಯೋಗವಾಗುತ್ತಿವೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಅಭಿಪ್ರಾಯವನ್ನು ಅವರು ಹೊರಹಾಕಿದ್ದಾರೆ.

ಸುಳ್ಳು ಸುದ್ದಿಗಳು ಹೆಚ್ಚಾಗುತ್ತಿರುವ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಚುನಾವಣಾ ರ್ಯಾಲಿಯಲ್ಲಿ ಕೆಲಸ ಮಾಡಿದ ಕಂಪೆನಿ ಕೇಂಬ್ರಿಡ್ಜ್ ಅನಾಲೆಟಿಕದ ಖಾಸಗಿ ದಾಖಲೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಇದರಿಂದಾಗಿ ಸಹಜವಾಗಿ ಕಳೆದ ನಾಲ್ಕೈದು ದಿನಗಳಿಂದ ಫೇಸ್ ಬುಕ್  ಕಂಪೆನಿಯ ಷೇರುಗಳ ಮಾರಾಟದಲ್ಲಿ ಇಳಿಮುಖವಾಗಿದೆ.

ಈ ಮಧ್ಯೆ 50 ದಶಲಕ್ಷ ಫೇಸ್ ಬುಕ್ ಬಳಕೆದಾರರ ಖಾಸಗಿ ಮಾಹಿತಿಗಳು ಸಿಕ್ಕಿದ ಆರೋಪಗಳ ಮೇಲೆ ಕೇಂಬ್ರಿಡ್ಜ್ ಅನಾಲಿಟಿಕ ನಿನ್ನೆ ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಲೆಕ್ಸಾಂಡರ್ ನಿಕ್ಕಿಯನ್ನು ಅಮಾನತು ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.