ವಿಜ್ಞಾನ-ತಂತ್ರಜ್ಞಾನ

ಅಕ್ಟೋಬರ್ ಮೊದಲನೇ ವಾರದಲ್ಲಿ ಚಂದ್ರಯಾನ-2 ಉಡಾವಣೆ: ಇಸ್ರೋ ಮುಖ್ಯಸ್ಥರು

ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-2 ನ್ನು ಅಕ್ಟೋಬರ್ ಮೊದಲನೇ ವಾರದಲ್ಲಿ ಉಡಾವಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥರು ಹೇಳಿದ್ದಾರೆ.

ಅಕ್ಟೋಬರ್ ಮೊದಲನೇ ವಾರದಲ್ಲಿ ಚಂದ್ರಯಾನ-2 ಉಡಾವಣೆ: ಇಸ್ರೋ ಮುಖ್ಯಸ್ಥರು
ಚಂದ್ರಯಾನ-2
Published On :
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-2 ನ್ನು ಅಕ್ಟೋಬರ್ ಮೊದಲನೇ ವಾರದಲ್ಲಿ ಉಡಾವಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥರು ಹೇಳಿದ್ದಾರೆ. 
ಈ ಮೊದಲು ಏ.23 ಕ್ಕೆ ಉಡಾವಣೆಯ ದಿನಾಂಕ ನಿಗದಿಯಾಗಿತ್ತು. ಆದರೆ ಈಗ ಅದನ್ನು ಅಕ್ಟೋಬರ್ ಮೊದಲನೇ ವಾರಕ್ಕೆ ಮುಂದೂಡಲಾಗಿದೆ. ನಮ್ಮ ಸಿದ್ಧತೆಗಳಿಗೆ ಇಸ್ರೋದ ಮಾಜಿ ಅಧ್ಯಕ್ಷರು, ಬಾಹ್ಯಾಕಾಶ ತಜ್ಞರು, ಐಐಟಿ ಪ್ರಾಧ್ಯಾಪಕರು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ  ಸಂಕೀರ್ಣತೆಗಳನ್ನು ಗಮನದಲ್ಲಿಟ್ಟುಕೊಂಡು ದಿನಾಂಕವನ್ನು ಮುಂದೂಡಲಾಗಿದೆ ಎಂದು ಇಸ್ರೋ ಅಧ್ಯಕ್ಷ ಡಾ. ಕೆ ಶಿವನ್ ಹೇಳಿದ್ದಾರೆ. 
ಈ ಹಿಂದೆ ಚಂದ್ರಯಾನ-2 ಉಡಾವಣೆಯ ದಿನಾಂಕವನ್ನು ಏಪ್ರಿಲ್ 23 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಕೆಲವೊಂದು ಪರೀಕ್ಷೆಗಳು ಇನ್ನೂ 20 ದಿನಗಳ ಕಾಲಾವಕಾಶ ತೆಗೆದುಕೊಳ್ಳುತ್ತದೆ ಈ ಹಿನ್ನೆಲೆಯಲ್ಲಿ ದಿನಾಂಕವನ್ನು ಅಕ್ಟೋಬರ್ ಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.