ಶತ್ರುದೇಶದ ರೇಡಾರ್ ಪತ್ತೆ ಹಚ್ಚಬಲ್ಲ ಎಮಿಸ್ಯಾಟ್ ಯಶಸ್ವಿ ಉಡಾವಣೆ
ಶತ್ರು ರಾಷ್ಟ್ರಗಳ ನೆಲೆಗಳಲ್ಲಿರುವ ರೇಡಾರ್ ಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯವಿರುವ ಎಮಿಸ್ಯಾಟ್ ಉಪಗ್ರಹ ಸೇರಿದಂತೆ 29 ನ್ಯಾನೋ ಉಪಗ್ರಹಗಳನ್ನು ಇಸ್ರೋ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ...

Published On :
ಶ್ರೀಹರಿಕೋಟಾ: ಶತ್ರು ರಾಷ್ಟ್ರಗಳ ನೆಲೆಗಳಲ್ಲಿರುವ ರೇಡಾರ್ ಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯವಿರುವ ಎಮಿಸ್ಯಾಟ್ ಉಪಗ್ರಹ ಸೇರಿದಂತೆ 29 ನ್ಯಾನೋ ಉಪಗ್ರಹಗಳನ್ನು ಇಸ್ರೋ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ,
ಇಸ್ರೋದ ಪಿಎಸ್ ಎಲ್ ವಿ-ಸಿ45 ರಾಕೆಟ್ ಮೂಲಕ ಡಿಆರ್ ಡಿಒ ಅಭಿವೃದ್ಧಿ ಪಡಿಸಿದ ಎಮಿಸ್ಯಾಟ್, ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್ ಸೆಟಲೈಟ್ ಸೇರಿದಂತೆ ಅಮೆರಿಕದ 24, ಸ್ವಿರ್ಟ್ಜರ್ ಲೆಂಡ್ ನ 01, ಸ್ಪೇನ್ 1, ಲಿಥುಯೇನಿಯಾದ 02 ಹೊತ್ತೊಯ್ದಿದ್ದು, 3 ಕಕ್ಷೆಗಳಲ್ಲಿ ಈ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಿದೆ.
ಪಿಎಸ್‌ಎಲ್‌ವಿ 45 ಉಡಾಹಕ ನಿಗದಿಯಂತೆ 9.30ಕ್ಕೆ ಸರಿಯಾಗಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು, ಉಡಾಹಕವು ನಿಗದಿತ ಗಮ್ಯದತ್ತ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.
ಎಮಿಸ್ಯಾಟ್ ಉಪಗ್ರಹವನ್ನು ಡಿಆರ್ ಡಿಒ ಅಭಿವೃದ್ಧಿ ಪಡಿಸಿದೆ, ಮೊದಲ ಬಾರಿ ಮೂರು ವಿವಿಧ ಕಕ್ಷೆಗಳಲ್ಲಿ ರಾಕೆಟ್ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಿದೆ ಎಂದು ಇಸ್ರೋ ಅಧ್ಯಕ್ಷ ಕೆ,ಶಿವನ್ ಹೇಳಿದ್ದಾರೆ.
ಎಮಿಸ್ಯಾಟ್ ಉಪಗ್ರಹವನ್ನು ಇಂದು ಬೆಳಗ್ಗೆ ಯಶಸ್ವಿಯಾಗಿ ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ - ಇಸ್ರೋ ಸಾಧನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಹೇಳಿದ್ದಾರೆ.
“ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಸ್ರೋ ಸಾಧನೆಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಪಿಎಸ್‌ಎಲ್‌ವಿ ಸಿ 45 ವಾಹಕದ ಮೂಲಕ ವಿವಿಧ ದೇಶಗಳ 20 ಕ್ಕೂಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು” ಎಂದರು. ಎಮಿಸ್ಯಾಟ್ ಯಶಸ್ವಿ ಉಡಾವಣೆಯನ್ನು ಐತಿಹಾಸಿಕ, ಮಹತ್ವದ ಮೈಲಿಗಲ್ಲು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


