ಜಿ.ಕೆ. ವಿ. ಕೆಯಲ್ಲಿ ಜನವರಿ 3ರಿಂದ 107ನೇ ಭಾರತೀಯ ವಿಜ್ಞಾನ ಸಮ್ಮೇಳನ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಜ.3 ರಿಂದ 7ರ ವರೆಗೆ 107ನೇ ಭಾರತೀಯ ವಿಜ್ಞಾನ ಸಮ್ಮೇಳನವನ್ನು ಆಯೋಜಿಸಿದ್ದು, ಜಗತ್ತಿನ ಪ್ರಮುಖ ವಿಜ್ಞಾನಿಗಳು, ವೈಜ್ಞಾನಿಕ ಕ್ಷೇತ್ರದ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ತಿಳಿಸಿದ್ದಾರೆ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಜ.3 ರಿಂದ 7ರ ವರೆಗೆ 107ನೇ ಭಾರತೀಯ ವಿಜ್ಞಾನ ಸಮ್ಮೇಳನವನ್ನು ಆಯೋಜಿಸಿದ್ದು, ಜಗತ್ತಿನ ಪ್ರಮುಖ ವಿಜ್ಞಾನಿಗಳು, ವೈಜ್ಞಾನಿಕ ಕ್ಷೇತ್ರದ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ತಿಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜ್ಞಾನ ಸಮ್ಮೇಳನವು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, "ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿ" ವಿಷಯ ಈ ಸಮ್ಮೇಳನದ ಮುಖ್ಯ ಆಶಯವಾಗಿದೆ. ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಐದು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲ ಮುಖ್ಯ ಅತಿಥಿಗಳಾಗಿ ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಸಿ.ಎನ್ ಅಶ್ವಥ್ ನಾರಾಯಣ್, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಮೈಸೂರು ವಿ.ವಿ. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ ಮಾತನಾಡಿ, ಭಾರತದಲ್ಲಿ ವಿಜ್ಞಾನದ ಬೆಳವಣಿಗೆಯನ್ನು ಉತ್ತೇಜಿಸುವುದು. ದೇಶದಲ್ಲಿ ಸೂಕ್ತ ಸ್ಥಳದಲ್ಲಿ ವಾರ್ಷಿಕ ಸಮ್ಮೇಳನವನ್ನು ಆಯೋಜಿಸುವುದು ಮುಂತಾದ ಧ್ಯೇಯಗಳನ್ನು ಒಳಗೊಂಡಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


