'ಬಾಹುಬಲಿ' ವೀಕ್ಷಣೆಗೆ 7,134 ಜನರಿಂದ ನೋಂದಣಿ!
ಬಾಹುಬಲಿಯನ್ನು ಕಣ್ತುಂಬಿಕೊಳ್ಳುವುದಕ್ಕೆ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ.

Published On :
ಚೆನ್ನೈ: ಚಂದ್ರಯಾನ-2 ಬಾಹ್ಯಾಕಾಶ ನೌಕೆಯನ್ನು ಹೊತ್ತೊಯ್ಯಲಿರುವ ರಾಕೆಟ್ ಬಾಹುಬಲಿ ಗಗನಕ್ಕೆ ಚಿಮ್ಮುವುದಕ್ಕೆ ಜುಲೈ 15 ರಂದು ದಿನಾಂಕ ನಿಗದಿಯಾಗಿದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳುವುದಕ್ಕೆ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ.
ಭಾರತ ಬಾಹ್ಯಾಕಾಶ ಸಂಸ್ಥೆಯ ಈ ಸಾಧನೆಯನ್ನು ವೀಕ್ಷಿಸಲು ಈ ವರೆಗೂ 7,134 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಇಸ್ರೋ ಸಂಸ್ಥೆ ರಾಕೆಟ್ ಉಡಾವಣೆಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿತ್ತು, ಇದಕ್ಕಾಗಿ ಗ್ಯಾಲರಿಯನ್ನೂ ನಿರ್ಮಾಣ ಮಾಡಲಾಗಿದ್ದು ಸುಮಾರು 10,000 ಜನರನ್ನೊಳಗೊಳ್ಳುವ ಸಾಮರ್ಥ್ಯ ಹೊಂದಿದೆ.
ಜು.15 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಸ್ಪೇಸ್ ಸೆಂಟರ್ ನಿಂದ ಬಾಹುಬಲಿ ಉಡಾವಣೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


