ಎದುರಾಳಿ ಕ್ಷಿಪಣಿಗಳನ್ನು ದಾರಿತಪ್ಪಿಸಬಲ್ಲ ಚಾಫ್ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ಡಿಆರ್ ಡಿಒ
ಶತ್ರುಗಳ ರಡಾರ್ ನಿರ್ದೇಶಿತ ಕ್ಷಿಪಣಿಗಳನ್ನು ದಾರಿತಪ್ಪಿಸುವ ಸಾಮರ್ಥ್ಯ ಹೊಂದಿರುವ ಚಾಫ್ ತಂತ್ರಜ್ಞಾನವನ್ನು ಡಿಆರ್ ಡಿಒ ಅಭಿವೃದ್ಧಿಪಡಿಸಿದೆ.

ನವದೆಹಲಿ: ಶತ್ರುಗಳ ರಡಾರ್ ನಿರ್ದೇಶಿತ ಕ್ಷಿಪಣಿಗಳನ್ನು ದಾರಿತಪ್ಪಿಸುವ ಸಾಮರ್ಥ್ಯ ಹೊಂದಿರುವ ಚಾಫ್ ತಂತ್ರಜ್ಞಾನವನ್ನು ಡಿಆರ್ ಡಿಒ ಅಭಿವೃದ್ಧಿಪಡಿಸಿದೆ.
ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ಐಎಎಫ್ ಈ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಡಿಆರ್ ಡಿಒ ಗುರುವಾರ ಬಿಡುಗಡೆ ಮಾಡಿರುವ ಹೇಳಿಕೆಯ ಮೂಲಕ ತಿಳಿದುಬಂದಿದೆ.
"ಡಿಆರ್ ಡಿಒ ಪ್ರಯೋಗಾಲಯಗಳು ಅತ್ಯಾಧುನಿಕ ಚಾಫ್ ಮೆಟೀರಿಯಲ್ ಹಾಗೂ ಚಾಫ್ ಕಾರ್ಟ್ರಿಡ್ಜ್-118/I"ಯನ್ನು ಅಭಿವೃದ್ಧಿಪಡಿಸಿದ್ದು, ಐಎಎಫ್ ನ ಗುಣಾತ್ಮಕ ಅವಶ್ಯಕತೆಗಳನ್ನು ಪೂರೈಸಲಿದೆ" ಎಂದು ಐಎಎಫ್ ಹೇಳಿದೆ
ತಂತ್ರಜ್ಞಾನ ಶತ್ರುಗಳ ಕ್ಷಿಪಣಿಗಳನ್ನು ವಿಚಲಿತಗೊಳಿಸುವ ಮೂಲಕ ಕಾರ್ಯನಿರ್ವಹಣೆ ಮಾಡಲಿದ್ದು, ನಮ್ಮ ಯುದ್ಧವಿಮಾನಗಳನ್ನು ಸುರಕ್ಷಿತಗೊಳಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಉತ್ಪಾದಿಸುವುದಕ್ಕಾಗಿ ಈ ತಂತ್ರಜ್ಞಾನವನ್ನು ಸಂಬಂಧಪಟ್ಟ ಕೈಗಾರಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಐಎಎಫ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


