ಸೂರ್ಯನ ಅಧ್ಯಯನಕ್ಕೆ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್1 ಉಡಾವಣೆಗೆ ಇಸ್ರೋ ಸಿದ್ಧ
ಸೂರ್ಯನ ಕುರಿತು ಹೆಚ್ಚಿನ ಅಧ್ಯಯನಕ್ಕೆ ನೆರವಾಗುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್ 1 ಶೀಘ್ರದಲ್ಲೇ ಉಡಾವಣೆಗೆ ಸಿದ್ಧವಾಗುತ್ತಿದೆ ಎಂದು ಇಸ್ರೋ ಹೇಳಿದೆ.

ಬೆಂಗಳೂರು: ಸೂರ್ಯನ ಕುರಿತು ಹೆಚ್ಚಿನ ಅಧ್ಯಯನಕ್ಕೆ ನೆರವಾಗುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್ 1 ಶೀಘ್ರದಲ್ಲೇ ಉಡಾವಣೆಗೆ ಸಿದ್ಧವಾಗುತ್ತಿದೆ ಎಂದು ಇಸ್ರೋ ಹೇಳಿದೆ.
ಬೆಂಗಳೂರಿನ ಯು ಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ತಯಾರಾಗಿ ಈ ಉಪಗ್ರಹವು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸಿದೆ ಎಂದು ಇಸ್ರೋದ ಬೆಂಗಳೂರು ಪ್ರಧಾನ ಕಚೇರಿ ತಿಳಿಸಿದೆ.
ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆಯಾಗಬಹುದು ಎಂದು ಇಸ್ರೋ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಬಾಹ್ಯಾಕಾಶ ನೌಕೆಯನ್ನು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ(ಮೂರು ಆಯಾಮ ಕಕ್ಷೆಯಲ್ಲಿ) ಇರಿಸುವ ಯೋಜನೆಯಲ್ಲಿದ್ದಾರೆ ವಿಜ್ಞಾನಿಗಳು.
ಎಲ್ 1 ಬಿಂದುವಿನ ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾದ ಉಪಗ್ರಹವು ಸೂರ್ಯನನ್ನು ನಿರಂತರವಾಗಿ ವೀಕ್ಷಿಸುತ್ತದೆ. ಇದು ಸೌರ ಚಟುವಟಿಕೆಗಳನ್ನು ಮತ್ತು ನೈಜ ಸಮಯದಲ್ಲಿ ಬಾಹ್ಯಾಕಾಶ ಹವಾಮಾನದ ಮೇಲೆ ಅದರ ಪರಿಣಾಮವನ್ನು ವೀಕ್ಷಿಸಲು ಹೆಚ್ಚಿನ ಪ್ರಯೋಜನವನ್ನು ಒದಗಿಸುತ್ತದೆ ಎಂದು ಹೇಳಿದೆ.
ಬಾಹ್ಯಾಕಾಶ ನೌಕೆಯು ವಿದ್ಯುತ್ಕಾಂತೀಯ, ಕಣ ಮತ್ತು ಕಾಂತೀಯ ಕ್ಷೇತ್ರ ಶೋಧಕಗಳನ್ನು ಬಳಸಿಕೊಂಡು ದ್ಯುತಿಗೋಳ, ವರ್ಣಗೋಳ ಮತ್ತು ಸೂರ್ಯನ ಹೊರಗಿನ ಪದರಗಳನ್ನು ವೀಕ್ಷಿಸಲು ಏಳು ಪೇಲೋಡ್‌ಗಳನ್ನು ಒಯ್ಯುತ್ತದೆ.
ವಿಶೇಷ ವಾಂಟೇಜ್ ಪಾಯಿಂಟ್ L1 ನ್ನು ಬಳಸಿಕೊಂಡು, ನಾಲ್ಕು ಪೇಲೋಡ್‌ಗಳು ನೇರವಾಗಿ ಸೂರ್ಯನನ್ನು ವೀಕ್ಷಿಸುತ್ತವೆ. ಉಳಿದ ಮೂರು ಪೇಲೋಡ್‌ಗಳು L1 ನಲ್ಲಿ ಕಣಗಳು ಮತ್ತು ಕ್ಷೇತ್ರಗಳ ಸ್ಥಳದಲ್ಲೇ ಅಧ್ಯಯನಗಳನ್ನು ನಡೆಸುತ್ತವೆ, ಹೀಗಾಗಿ ಅಂತರಗ್ರಹ ಮಾಧ್ಯಮದಲ್ಲಿ ಸೌರ ಡೈನಾಮಿಕ್ಸ್‌ನ ಪ್ರಸರಣ ಪರಿಣಾಮದ ಪ್ರಮುಖ ವೈಜ್ಞಾನಿಕ ಅಧ್ಯಯನಗಳನ್ನು ಒದಗಿಸುತ್ತದೆ.
"ಆದಿತ್ಯ L1 ಪೇಲೋಡ್‌ಗಳ ಸೂಟ್‌ಗಳು ಕರೋನಲ್ ಹೀಟಿಂಗ್, ಕರೋನಲ್ ಮಾಸ್ ಎಜೆಕ್ಷನ್, ಪ್ರೀ-ಫ್ಲೇರ್ ಮತ್ತು ಫ್ಲೇರ್ ಚಟುವಟಿಕೆಗಳು ಮತ್ತು ಅವುಗಳ ಗುಣಲಕ್ಷಣಗಳು, ಬಾಹ್ಯಾಕಾಶ ಹವಾಮಾನದ ಡೈನಾಮಿಕ್ಸ್, ಕಣ ಮತ್ತು ಕ್ಷೇತ್ರಗಳ ಪ್ರಸರಣ ಇತ್ಯಾದಿಗಳ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಅತ್ಯಂತ ನಿರ್ಣಾಯಕವಾಗಿದೆ ಎಂದು ಇಸ್ರೋ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


