Axiom 4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನಕ್ಕೆ ಕೊನೆಗೂ ದಿನಾಂಕ ಫಿಕ್ಸ್; ಜೂನ್ 25ಕ್ಕೆ ಉಡಾವಣೆ
ಜೂನ್ 25ರಂದು ಆಕ್ಸಿಯಮ್-4 ಮಿಷನ್ ಉಡಾವಣೆ ಮಾಡಲಾಗುವುದು ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ.

ಬೆಂಗಳೂರು: ಭಾರತದ ಬಾಹ್ಯಾಕಾಶ ಯಾನದಲ್ಲಿ ಒಂದು ದೊಡ್ಡ ಮತ್ತು ಐತಿಹಾಸಿಕ ದಿನ ಕೊನೆಗೂ ಹತ್ತಿರ ಬಂದಿದ್ದು, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಬುಧವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿದ್ದಾರೆ.
ಜೂನ್ 25ರಂದು ಆಕ್ಸಿಯಮ್-4 ಮಿಷನ್ ಉಡಾವಣೆ ಮಾಡಲಾಗುವುದು ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನೇತೃತ್ವದ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆ ಜೂನ್ 25 ರಂದು ಉಡಾವಣೆಗೊಳ್ಳಲಿದೆ ಎಂದು ನಾಸಾ ಮತ್ತು ಸ್ಪೇಸ್‌ಎಕ್ಸ್ ಜಂಟಿಯಾಗಿ ಭರವಸೆ ನೀಡಿದೆ.
ತಾಂತ್ರಿಕ ತೊಂದರೆಗಳ ಕಾರಣಕ್ಕೆ ಈಗಾಗಲೇ ಹಲವು ಬಾರಿ ಮುಂದೂಡಲ್ಪಟ್ಟಿದ್ದ ಆಕ್ಸಿಯಮ್-4 ಬಾಹ್ಯಾಕಾಶ ಕಾರ್ಯಾಚರಣೆಯನ್ನು ಎಲ್ಲಾ ತಾಂತ್ರಿಕ ದೋಷಗಳನ್ನು ನಿವಾರಣೆ ಮಾಡಿದ ಬಳಿಕ ಕಾರ್ಯಾಚರಣೆಗೆ ಸಿದ್ಧಪಡಿಸಲಾಗಿದ್ದು, ಬುಧವಾರ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದೆ.
ಆ್ಯಕ್ಸಿಯಂ–4 ಮಿಷನ್ ಜೂನ್ 25 ರಂದು ಬೆಳಗಿನ ಜಾವ 2:31ಕ್ಕೆ ಫ್ಲೊರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್ ಹಾರಾಟ ನಡೆಸಲಿದೆ ಎಂದು ಎಂದು ನಾಸಾ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕಾರ್ಯಾಚರಣೆಯ ನೇರಪ್ರಸಾರವನ್ನು ಉಡಾವಣೆಗೆ ಸುಮಾರು ಎರಡು ಗಂಟೆಗಳ ಮೊದಲು ಪ್ರಾರಂಭಿಸಲಾಗುತ್ತದೆ. ಇದನ್ನು @SpaceX ಹ್ಯಾಂಡಲ್‌ನಲ್ಲಿ X-ಪ್ಲಾಟ್‌ಫಾರ್ಮ್‌ನಲ್ಲಿ ವೀಕ್ಷಿಸಬಹುದಾಗಿದೆ.
ಕಮಾಂಡರ್ ಪೆಗ್ಗಿ ವಿಟ್ಸನ್ ಅವರು, ಆ್ಯಕ್ಸಿಯಂ–4 ವಾಣಿಜ್ಯ ಕಾರ್ಯಾಚರಣೆಯ ನೇತೃತ್ವವಹಿಸಿದ್ದು, ಶುಕ್ಲಾ ಮಿಷನ್ ಪೈಲಟ್ ಆಗಿ, ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮಿಷನ್ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



