ಚಿಕ್ಕಮಗಳೂರ ಈ ಹುಡುಗಿ ದಕ್ಷಿಣ ಭಾರತದ ಮೊದಲ ಯುದ್ಧವಿಮಾನ ಮಹಿಳಾ ಪೈಲಟ್
ಘಮಘಮಿಸುವ ಕಾಫಿಗೆ ಹೆಸರಾಗಿರುವ ಚಿಕ್ಕಮಗಳೂರಿನ ಹೆಮ್ಮೆಯ ಕಿರೀಟಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಯಾಗಿದೆ.

Published On :
ಹೈದರಾಬಾದ್: ಘಮಘಮಿಸುವ ಕಾಫಿಗೆ ಹೆಸರಾಗಿರುವ ಚಿಕ್ಕಮಗಳೂರಿನ ಹೆಮ್ಮೆಯ ಕಿರೀಟಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಚಿಕ್ಕಮಗಳೂರಿನವರಾದ ಮೇಘನಾ ಶಾನಭೋಗ್ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹಾ ಸಾಧನೆ ಮಾಡಿದ ಮಹಿಳೆಯಾಗಿ ಮೇಘನಾ ಗುರುತಿಸಲ್ಪಡುತ್ತಾರೆ.
ಹೈದರಾಬಾದ್ ನ ದುಂಡಿಗಲ್ ವಾಯುಪಡೆ ಅಕಾಡಮಿಯಲ್ಲಿ ಮೇಘನಾ ಯುದ್ಧ ವಿಮಾನ ಪೈಲಟ್ ತರಬೇತಿ ಮುಗಿಸಿದ್ದು ಪೈಲಟ್ ಹುದ್ದೆಗೆ ನಡೆದ ಆಯ್ಜೆ ಪ್ರಕ್ರಿಯೆಯಲ್ಲಿ ತೇರ್ಗಡೆಯಾಗಿದ್ದಾರೆ. ಶನಿವಾರ ನಡೆದ ಪಥಸಂಚಲನದ ವೇಳೆ ಈ ಸಂಬಂಧ ಅಧಿಕೃತ ಘೋಷಣೆ ಮಾಡಲಾಗಿದೆ.
ಮೇ 30, 1994 ಚಿಕ್ಕಮಗಳೂರಿನ ಮರ್ಲೆಯಲ್ಲಿ ಜನಿಸಿದ ಮೇಘನಾ ಅವರ ತಂದೆ ಎಂ.ಕೆ.ಸುರೇಶ್ ವಕೀಲ ವೃತ್ತಿ ಮಾಡುತ್ತಿದ್ದು ತಾಯಿ ಪಿ.ವಿ.ಶೋಭಾ ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯದ ನ್ಯಾಯಾಧಿಶೆಯಾಗಿದ್ದಾರೆ. ನಾಲ್ಕನೇ ತರಗತಿವರೆಗೆ ಮಹರ್ಷಿ ವಿದ್ಯಾಮಂದಿರದಲ್ಲಿ ವ್ಯಾಸಂಗ ಮಾಡಿದ್ದ ಮೇಘನಾ 5ನೇ ತರಗತಿಯಿಂದ ಪಿಯು ವರೆಗೂ ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಸ್ಕೂಲ್ ನಲ್ಲಿ ಕಲಿತರು.

ಮೈಸೂರು ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾಹಿತಿ ವಿಜ್ಞಾನ ಇಂಜಿನಿಯರಿಂಗ್ ಪದವಿ ಗಳಿಸಿದ ಮೇಘನಾ ಡಿಸ್ಟಿಂಕ್ಷನ್ ಪಡೆದಿದ್ದರು.ಈ ಬಳಿಕ ಸಿವಿಲ್ ಸರ್ವೀಸ್ ಸೇರುವ ಉದ್ದೇಶದಿಂದ ದೆಹಲಿಯಲ್ಲಿ ತರಬೇತಿಗೆ ದಾಖಲಾದ ಇವರು ಹಲವು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಈಗ ಯುದ್ಧ ವಿಮಾನ ಪೈಲಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ.
ದೇಶಾದ್ಯಂತದ 24 ಅಭ್ಯರ್ಥಿಗಳ ಪೈಕಿ ಇಬ್ಬರನ್ನು ಪೈಲಟ್ ತರಬೇತಿಗಾಗಿ ಆಯ್ಕೆ ಮಾಡಲಾಗಿತ್ತು. ಆ ಇಬ್ಬರಲ್ಲಿ ಒಬ್ಬರು ಕನ್ನಡ ಕುವರಿಯಾಗಿರುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಚಿಕ್ಕಮಗಳೂರುChikmagalurMeghana Shanabhogfighter jet pilotಮೇಘಾನಾ ಶಾನಭೋಗ್ಫೈಟರ್ ಜೆಟ್ ಪೈಲಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


