ಕೋವಿಡ್ ಮೃತರ ಗೌರವಯುತ ಅಂತ್ಯಸಂಸ್ಕಾರ; ಇತರರಿಗೆ ಮಾದರಿಯಾದ ಬೆಂಗಳೂರು ವಿದ್ಯಾರ್ಥಿನಿಯರು
ಮಹಾಮಾರಿ ಕೊರೋನಾ ಜನರನ್ನು ಮಾನಸಿಕವಾಗಿಯೂ ದೈಹಿಕವಾಗಿಯೂ ದೂರಾಗುವಂತೆ ಮಾಡಿದ್ದು, ಕೊರೊನಾ ಕರಾಳತೆಗೆ ಸಿಲುಕಿ ಮೃತಪಟ್ಟವರ ಅಂತ್ಯಸಂಸ್ಕಾರದಲ್ಲಿ ಸಂಬಂಧಿಕರಿರಲಿ ಸ್ವತಃ ಕುಟುಂಬಸ್ಥರು ಕೂಡ ಭಾಗಿಯಾಗಲು ಹೆದರುವಂತಾಗಿದೆ.

ಬೆಂಗಳೂರು: ಮಹಾಮಾರಿ ಕೊರೋನಾ ಜನರನ್ನು ಮಾನಸಿಕವಾಗಿಯೂ ದೈಹಿಕವಾಗಿಯೂ ದೂರಾಗುವಂತೆ ಮಾಡಿದ್ದು, ಕೊರೊನಾ ಕರಾಳತೆಗೆ ಸಿಲುಕಿ ಮೃತಪಟ್ಟವರ ಅಂತ್ಯಸಂಸ್ಕಾರದಲ್ಲಿ ಸಂಬಂಧಿಕರಿರಲಿ ಸ್ವತಃ ಕುಟುಂಬಸ್ಥರು ಕೂಡ ಭಾಗಿಯಾಗಲು ಹೆದರುವಂತಾಗಿದೆ.
ಸತ್ತಾಗ ಹೆಗಲು ಕೊಡಲು ನಾಲ್ಕು ಮಂದಿ ಬೇಕು ಎಂದು ಹೇಳುತ್ತಾರೆ. ಆದರೆ, ಪ್ರಸ್ತುತದ ಪರಿಸ್ಥಿತಿಯಲ್ಲಿ ಕೊರೋನಾ ಭೀತಿಯಿಂದ ಮೃತಪಟ್ಟವರ ದೇಹವನ್ನು ಮುಟ್ಟಲು ಸಹ ಕೆಲ ಕುಟುಂಬಸ್ಥರು ಮುಂದಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಬೆಂಗಳೂರಿನ ಈ ಇಬ್ಬರು ವಿದ್ಯಾರ್ಥಿನಿಯರು ಇತರರಿಗೆ ಮಾದರಿಯಾಗಿದ್ದು, ಕೊರೊನಾ ಆತಂಕದಲ್ಲೂ ಸಾಮಾಜಿಕ ಬದ್ಧತೆ ಮೆರೆದಿದ್ದಾರೆ.
ಆಪ್ತ ಸಂಬಂಧಿಕರೇ ದೂರ ಹೋಗೋ ಈ ಕಾಲದಲ್ಲಿ ಯುವತಿಯರು ಸ್ಮಶಾನ ಸೇವೆ ಮಾಡುತ್ತಿದ್ದಾರೆ. ಬೆಂಗಳೂರಿನ ಕಾಲೇಜು ವಿದ್ಯಾರ್ಥಿನಿಯರಿಬ್ಬರು ಸೋಂಕಿನಿಂದ ಮೃತಪಟ್ಟವರ ಮೃತದೇಹಗಳನ್ನು ತೆಗೆದುಕೊಂಡು ಹೋಗಿ ಗೌರವಯುವ ಅಂತ್ಯಸಂಸ್ಕಾರ ನಡೆಸುತ್ತಿದ್ದಾರೆ. ದಿನದಲ್ಲಿ ಎಷ್ಟು ಸಾಧ್ಯವೋ ಅಷ್ಟು ಅಂತ್ಯಸಂಸ್ಕಾರ ಇವರಿಂದಾಗುತ್ತಿದೆ.
ನಿಕೋಲೆ ಫೊರ್ಟಾಡೋ (20), ಟೀನಾ ಚೆರಿಯನ್ (21) ಎಂಬ ಯುವತಿಯರಿಬ್ಬರು ಸ್ಮಶಾನಗಳ ಎದುರು ಸಾಲಾಗಿ ನಿಂತ ಆಂಬುಲೆನ್ಸ್‌ಗಳಿಂದ ಮೃತದೇಹಗಳನ್ನು ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ. ಹೊಸೂರು ಮುಖ್ಯರಸ್ತೆಯಲ್ಲಿರುವ ಸ್ಮಶಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೊರೋನಾ ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡುವ ಒಂದು ತಂಡದೊಂದಿಗೆ ಇಬ್ಬರು ಯುವತಿಯರು ಮೃತರ ಕುಟುಂಬಕ್ಕೆ ನೆರವಾಗುತ್ತಿದ್ದಾರೆ.
ನಮ್ಮ ಕುಟುಂಬಸ್ಥರು ಕೊರೋನಾ ಪರಿಹಾರ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅದರಿಂದ ನಾವು ಪ್ರೇರಣೆಗೊಂಡಿದ್ದೇವೆ. ಇತರರಿಗೆ ಸಹಾಯ ಮಾಡಲು ನನಗೆ ಸಾಕಷ್ಟು ಸಂತೋಷವಾಗುತ್ತಿದೆ. ಎಲ್ಲದರಲ್ಲೂ ಅಪಾರ ಇದ್ದೇ ಇರುತ್ತದೆ. ಮನೆಯಲ್ಲಿ ಒಬ್ಬಂಟಿಯಾಗಿ ಕೂರುವುದು ಮತ್ತಷ್ಟು ಸಮಸ್ಯೆಯನ್ನು ಎದುರು ಮಾಡುತ್ತದೆ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


