ಕನ್ನಡ ಸಾಹಿತ್ಯ ಪ್ರಚಾರಕ್ಕೆ ಒತ್ತು, ಇ-ಲೈಬ್ರರಿ ಸ್ಥಾಪನೆಗೆ ಒಲವು: ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಮಹೇಶ್ ಜೋಶಿ
ಇತ್ತೀಚಿಗಷ್ಟೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದ ಮಹೇಶ್ ಜೋಶಿ ತಾವು ಕೈಗೊಳ್ಳಲಿರುವ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಇತ್ತೀಚಿಗಷ್ಟೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದ ದೂರದರ್ಶನದ ಮಾಜಿ ಹೆಚ್ಚುವರಿ ನಿರ್ದೇಶಕ ಮಹೇಶ್ ಜೋಶಿ ತಾವು ಕೈಗೊಳ್ಳಲಿರುವ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: 2022 ರ ಜನವರಿ-ಫೆಬ್ರವರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ಮುಂದಿನ 5 ವರ್ಷಗಳ ತಮ್ಮ ಅಧಿಕಾರ ಅವಧಿಯಲ್ಲಿ ಕನ್ನಡ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ಅವರು ತಿಳಿಸಿದ್ದಾರೆ. ಮೊದಲಿಗೆ ಕನ್ನಡ ಪುಸ್ತಕಗಳ ಇ-ಲೈಬ್ರರಿಯನ್ನು ಸ್ಥಾಪಿಸುವ ಇರಾದೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅದರಿಂದ ಪ್ರಪಂಚದಾದ್ಯಂತ ಕನ್ನಡಿಗರು ಕನ್ನಡ ಸಾಹಿತ್ಯದ ಜೊತೆ ಒಡನಾಟ ಹೊಂದಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಹೇಶ್ ಜೋಶಿ ಅವರು ಕಸಾಪ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಶೇಖರಗೌಡ ಮಾಲಿಪಾಟೀಲ ವಿರುದ್ಧ ಸುಮಾರು 46,000 ಮತಗಳ ಅಂತರದಿಂದ ಗೆದ್ದಿದ್ದರು. ಕಸಾಪ ಆಜೀವ ಸದಸ್ಯತ್ವ ಶುಲ್ಕವನ್ನು 500 ರೂ.ಗಳಿಂದ 250 ರೂ.ಗಳಿಗೆ ಇಳಿಸುವ ಯೋಜನೆಯನ್ನೂ ಮಹೇಶ್ ಜೋಶಿ ಹೊಂದಿದ್ದಾರೆ. ವಿದ್ಯಾರ್ಥಿಗಳು ಕಸಾಪ ಸದಸ್ಯರಾಗಲು ಉತ್ತೇಜನ ನೀಡಬೇಕು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


