ವಿಶೇಷ

ವಿಜಯವಾಡ: ಅನಾರೋಗ್ಯ ಪೀಡಿತ ಬೀದಿ ನಾಯಿಗಳಿಗೆ ವೈದ್ಯಕೀಯ ನೆರವು ಕಲ್ಪಿಸುವ ಪ್ರಾಣಿಪ್ರಿಯ ವೆಂಕಟೇಶ್ವರಲು!

ಆಂಧ್ರ ಪ್ರದೇಶದ 71 ವರ್ಷದ ಮುರುಳ ವೆಂಕಟೇಶ್ವರಲು ವಿಜಯವಾಡದಲ್ಲಿರುವ ತನ್ನ ವಿಶಿಷ್ಠ ಆಶ್ರಮದಲ್ಲಿ ಅನಾರೋಗ್ಯಕ್ಕೊಳಗಾದ ಬೀದಿನಾಯಿಗಳಿಗೆ ವೈದ್ಯಕೀಯ ನೆರವು ನೀಡುತ್ತಾ ಬಂದಿದ್ದಾರೆ.

ವಿಜಯವಾಡ: ಅನಾರೋಗ್ಯ ಪೀಡಿತ ಬೀದಿ ನಾಯಿಗಳಿಗೆ ವೈದ್ಯಕೀಯ ನೆರವು ಕಲ್ಪಿಸುವ ಪ್ರಾಣಿಪ್ರಿಯ ವೆಂಕಟೇಶ್ವರಲು!
ಮುರುಳ ವೆಂಕಟೇಶ್ವರಲು
Published On :

ವಿಜಯವಾಡ: ಆಂಧ್ರ ಪ್ರದೇಶದ 71 ವರ್ಷದ ಮುರುಳ ವೆಂಕಟೇಶ್ವರಲು ವಿಜಯವಾಡದಲ್ಲಿರುವ ತನ್ನ ವಿಶಿಷ್ಠ ಆಶ್ರಮದಲ್ಲಿ ಅನಾರೋಗ್ಯಕ್ಕೊಳಗಾದ ಬೀದಿನಾಯಿಗಳಿಗೆ ವೈದ್ಯಕೀಯ ನೆರವು ನೀಡುತ್ತಾ ಬಂದಿದ್ದಾರೆ. ಈ ಆಶ್ರಮದಲ್ಲಿ ನಾಯಿಗಳಿಗೆ ಬೇಕಾದ ಎಲ್ಲಾ ರೀತಿಯ ಔಷಧಗಳು ಲಭ್ಯವಿದ್ದು, ಅನಾರೋಗ್ಯ ಪೀಡಿತ ನಾಯಿಗಳಿಗೆ ವೈದ್ಯಕೀಯ ನೆರವು ನೀಡಲಾಗುತ್ತದೆ. 

ಮುರುಳ ವೆಂಕಟೇಶ್ವರಲು ಐದು ವರ್ಷದ ಬಾಲಕನಾಗಿದ್ದಾಗಿನಿಂದ ಈ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಆರಂಭದಲ್ಲಿ ತುಂಬಾ ಆರ್ಥಿಕ ಸಮಸ್ಯೆಯನ್ನು ಎದುರಿಸಿದ್ದೆ, ನನ್ನು ಇಡೀ ಆದಾಯವನ್ನು ನಾಯಿಗಳಿಗೆ ವೈದ್ಯಕೀಯ ವೆಚ್ಚಕ್ಕಾಗಿ ವೆಚ್ಚ ಮಾಡುತ್ತಿದ್ದಾಗಿ ತಿಳಿಸಿದ್ದಾರೆ.

ಈಗ ಜನರು ಕೂಡಾ ಪ್ರೇರಿತರಾಗಿದ್ದು, ದೇಣಿಗೆಯನ್ನು ಸ್ವೀಕರಿಸುತ್ತಿದ್ದೇವೆ, ಪ್ರತಿ ತಿಂಗಳು ಸುಮಾರು 80 ಸಾವಿರದಿಂದ 1 ಲಕ್ಷ ರೂ. ವರೆಗೂ ದೇಣಿಗೆ ಬರುತ್ತಿದೆ. ಜನರು ಕೂಡಾ ಅನಾರೋಗ್ಯದಿಂದ ಬಳಲುತ್ತಿರುವ ನಾಯಿಗಳನ್ನು ತರುತ್ತಿರುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.