ಕಾಕಿನಾಡ ಸರ್ಕಾರಿ ಶಾಲೆಗಳಲ್ಲಿ ಅಮೆರಿಕನ್ ಉಚ್ಚಾರಣೆಯಲ್ಲಿ ಇಂಗ್ಲಿಷ್ ಕಲಿಕೆ!
ಕಾಕಿನಾಡ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ರೆಡಿನೆಸ್ ಇನಿಶಿಯೇಟಿವ್ ಫಾರ್ ಸಿಚುಯೇಷನಲ್ ಇಂಗ್ಲಿಷ್(ರೈಸ್) ಕಾರ್ಯಕ್ರಮವನ್ನು ಅಧಿಕೃತವಾಗಿ ಅನುಷ್ಠಾನಗೊಳಿಸುವ ಮಾದರಿಯನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ.

ಕಾಕಿನಾಡ: ಕಾಕಿನಾಡ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ರೆಡಿನೆಸ್ ಇನಿಶಿಯೇಟಿವ್ ಫಾರ್ ಸಿಚುಯೇಷನಲ್ ಇಂಗ್ಲಿಷ್(ರೈಸ್) ಕಾರ್ಯಕ್ರಮವನ್ನು ಅಧಿಕೃತವಾಗಿ ಅನುಷ್ಠಾನಗೊಳಿಸುವ ಮಾದರಿಯನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ.
ಈ ಉಪಕ್ರಮದ ಭಾಗವಾಗಿ, ಬೆಂಡಪುಡಿ ಜಿಲ್ಲಾ ಪರಿಷತ್ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕ ಜಿ.ವಿ.ಪ್ರಸಾದ್ ಅವರ ಮಾರ್ಗದರ್ಶನದಲ್ಲಿ 12 ತಜ್ಞರ ತಂಡವು ವಿದ್ಯಾರ್ಥಿಗಳಿಗೆ ಅಮೆರಿಕನ್ ಉಚ್ಚಾರಣೆಯಲ್ಲಿ ಇಂಗ್ಲಿಷ್ ಮಾತನಾಡಲು ಕಲಿಸುತ್ತದೆ. ಪ್ರಸಾದ್ ಅವರಿಂದ ತರಬೇತಿ ಪಡೆದಿದ್ದ ವಿದ್ಯಾರ್ಥಿಗಳ ಗುಂಪು ಅಮೆರಿಕನ್ ಉಚ್ಚಾರಣೆಯಲ್ಲಿ ಇಂಗ್ಲಿಷ್‌ನಲ್ಲಿ ಮಾತನಾಡಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಮನಸ್ಸು ಗೆದ್ದಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಕ್ಕಳು ಜಗನ್ ಅವರೊಂದಿಗೆ ಸಂವಹನ ನಡೆಸುತ್ತಿರುವ ವೀಡಿಯೊ ವೈರಲ್ ಆದ ನಂತರ, ವಿದೇಶದಲ್ಲಿ ವಾಸಿಸುವ ಹಲವಾರು ಜನ ಈ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವು ನೀಡಲು ಮುಂದೆ ಬಂದಿದ್ದರು.
ವಿದ್ಯಾರ್ಥಿಗಳಿಗೆ ಉಚ್ಚಾರಣಾ ಇಂಗ್ಲಿಷ್ ಕಲಿಸುವ ಪ್ರಸಾದ್ ಅವರ ಉಪಕ್ರಮದ ಯಶಸ್ಸಿನ ನಂತರ, ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರೌಢಶಾಲೆಗಳಲ್ಲೂ ಇದೇ ರೀತಿಯ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಅವರನ್ನು ಆಹ್ವಾನಿಸಿದ್ದರು. ಈ ವರ್ಷ ಜುಲೈನಲ್ಲಿ ತುನಿ ಕ್ಷೇತ್ರದ ವ್ಯಾಪ್ತಿಯ 34 ಶಾಲೆಗಳಲ್ಲಿ ರೈಸ್ ಕಾರ್ಯಕ್ರಮಕ್ಕೆ ಪ್ರಾಯೋಗಿಕ ಚಾಲನೆ ನೀಡಲಾಗಿತ್ತು.
ಅಮೆರಿಕನ್ ಉಚ್ಚಾರಣೆಯಲ್ಲಿ ಇಂಗ್ಲಿಷ್ ಕಲಿಕೆ:
ರೈಸ್ ತಂಡವು ಇತ್ತೀಚೆಗೆ ಕಾಕಿನಾಡ ನಗರ ಮತ್ತು ಗ್ರಾಮಾಂತರ ಮಂಡಲಗಳತ್ತ ತನ್ನ ಗಮನವನ್ನು ಹರಿಸಿದೆ. ನಗರದ ಸ್ಪಂದನಾ ಸಭಾಂಗಣದಲ್ಲಿ ಮಾಡ್ಯೂಲ್‌ಗೆ ಚಾಲನೆ ನೀಡಿದ ನಂತರ ಜಿಲ್ಲಾಧಿಕಾರಿ ಕೃತಿಕಾ ಶುಕ್ಲಾ ಅವರು ವಿದ್ಯಾರ್ಥಿಗಳು ಮತ್ತು ಅವರ ತರಬೇತುದಾರರೊಂದಿಗೆ ಸಂವಾದ ನಡೆಸಿದರು. ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುವ ಮಕ್ಕಳ ಪ್ರಗತಿಯನ್ನು ಅವರು ಶ್ಲಾಘಿಸಿದರು.
ನಂತರ ಜಿಲ್ಲಾಧಿಕಾರಿಗಳು ಈ ಯೋಜನೆ ಹಾಗೂ ಅದರ ಫಲಿತಾಂಶಗಳ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


