ಲಂಕಾ-ಆಸೀಸ್ ಪಂದ್ಯ ರದ್ದು: ಐಸಿಸಿಗೆ ಪತ್ರ

ಮೆಲ್ಬರ್ನ್: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇತ್ತೀಚೆಗೆ ನಡೆದಿದ್ದ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಪಂದ್ಯವನ್ನು ಮಧ್ಯದಲ್ಲೇ ರದ್ದುಗೊಳಿದ್ದರ ಹಿನ್ನೆಲೆಯಲ್ಲಿ, ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ (ಸಿಎ) ಮುಖ್ಯಸ್ಥ ಜೇಮ್ಸ್ ಸದರ್‌ಲ್ಯಾಂಡ್ ಐಸಿಸಿಗೆ ಪತ್ರ ಬರೆದಿದ್ದಾರೆ. ಕಳೆದ ತಿಂಗಳು ನಡೆದಿದ್ದ ಈ ಪಂದ್ಯದ ಮಧ್ಯದಲ್ಲಿ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಪಡಿಸಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಿಎ, ಮಳೆಯಿಂದಾಗಿ ಅರ್ಧಕ್ಕೇ ನಿಂತ ಪಂದ್ಯವನ್ನು ಪುನರಾಂಭಿಸುವ ಕುರಿತಾಗಿ ಐಸಿಸಿ ನಿಗದಿಪಡಿಸಿರುವ ನಿಯಮಾವಳಿಗಳಲ್ಲಿ ಬದಲಾವಣೆ ತರಬೇಕೆಂದು ಹೇಳಿದೆ. ಮಳೆಯಿಂದಾಗಿ ಪಂದ್ಯವನ್ನು ಪುನಃ ಆರಂಭಿಸುವ ಹಾಗಿದ್ದರೂ, ನಿಯಮಾವಳಿಗಳನ್ನೇ ಆಧಾರವಾಗಿಟ್ಟುಕೊಂಡು ಅಂಪೈರ್‌ಗಳು ಪಂದ್ಯಗಳನ್ನು ರದ್ದುಗೊಳಿತ್ತಾರೆ. ಇದರಿಂದ, ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗುವುದಲ್ಲದೇ, ಅದರ ಖ್ಯಾತಿಗೂ ಕುಂದು ಬರುತ್ತದೆ ಎಂದು ಜೇಮ್ಸ್ ಪತ್ರದಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


