ಸೌರಭ್ ವರ್ಮಾಗೆ ಪ್ರಶಸ್ತಿ

ಬೆಂಗಳೂರು: ಆಕರ್ಷಕ ಪ್ರದರ್ಶನ ತೋರುವ ಮೂಲಕ ಎದುರಾಳಿಗೆ ಸೋಲುಣಿಸಿದ ಸೌರಭ್ ವರ್ಮಾ ನಗರದಲ್ಲಿ ಶನಿವಾರ ಮುಕ್ತಾಯಗೊಂಡ ಅಖಿಲ ಭಾರತ ಹಿರಿಯರ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಿಂಗಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡರು.
ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಸೌರಭ್ ಅವರು ಸಾಯಿ ಪ್ರಣೀತ್ ಅವರನ್ನು 21-17, 21-15 ನೇರ ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿದರು. ಪುರುಷರ ಡಬಲ್ಸ್ ವಿಭಾಗದಲ್ಲಿ ಅಲ್ವಿನ್ ಫ್ರೆಂಚ್ ಮತ್ತು ವಿ. ಡಿಜು ಜೋಡಿ, ಅಕ್ಷಯ್ ದಿವಾಲ್ಕರ್ ಮತ್ತು ಪ್ರಣವ್ ಜೆರ್ರಿ ಚೋಪ್ರಾ ಜೋಡಿಯನ್ನು 10-21, 21-18, 21-10 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಬಾಚಿಕೊಂಡಿತು.
ಇನ್ನು ಮಹಿಳೆಯರ ಸಿಂಗಲ್ಸ್‌ನಲ್ಲಿ ಮಹಾರಾಷ್ಟ್ರದ ಅರುಂಧತಿ ಪಂತ್ವಾನೆ ಅವರು ತನ್ವಿ ಲಾಡ್ ಅವರನ್ನು 21-16, 22-20 ನೇರ ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿದರು. ಮಹಿಳೆಯರ ಸಿಂಗಲ್ಸ್‌ನಲ್ಲಿ ಮನೀಶಾ ಕೆ ಮತ್ತು ಸನ್ನಿಯೋಗಿತ್ ಘೋರ್ಪಡೆ ಜೋಡಿ ಆರತಿ ಸರಾ ಮತ್ತು ಪ್ರಜಕ್ತಾ ಸಾವಂತ್ ಜೋಡಿಯನ್ನು 16-21, 23-21, 22-20 ಸೆಟ್‌ಗಳಿಂದ ಮಣಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಮಿಶ್ರ ಡಬಲ್ಸ್ ವಿಭಾಗದಲ್ಲಿ ಪ್ರಣವ್ ಜೆರ್ರಿ ಚೋಪ್ರಾ ಮತ್ತು ಮನಿಶಾ ಕೆ ಜೋಡಿ, ಅರುಣ್ ವಿಷ್ಣು ಮತ್ತು ಅಪರ್ಣಾ ಬಾಲನ್ ಜೋಡಿಯನ್ನು 21-15, 18-21, 22-20 ಸೆಟ್‌ಗಳಿಂದ ಪ್ರಯಾಸದ ಜಯ ಸಾಧಿಸಿ ಪ್ರಶಸ್ತಿ ಗೆದ್ದುಕೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


