ಕ್ರೀಡೆ

ಒಎನ್‌ಜಿಸಿ ಮುಡಿಗೆ ಪ್ರಶಸ್ತಿ

ಒಎನ್‌ಜಿಸಿ ಮುಡಿಗೆ ಪ್ರಶಸ್ತಿ
Published On :

ಬೆಂಗಳೂರು: ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯವಾದ 27ನೇ ರಾಷ್ಟ್ರೀಯ ಫೆಡರೇಷನ್ ಕಪ್ ಬಾಸ್ಕೆಟ್‌ಬಾಲ್ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಒಎನ್‌ಜಿಸಿ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಒಎನ್‌ಜಿಸಿ ತಂಡ ಚೆನ್ನೈನ ಐಒಬಿ ತಂಡವನ್ನು 72-46 ಅಂಕಗಳಿಂದ ಪರಾಭವಗೊಳಿಸಿತು.
ಇನ್ನು ತೀವ್ರ ಹಣಾಹಣಿಯಿಂದ ನಡೆದ ಮಹಿಳೆಯರ ವಿಭಾಗದ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರವನ್ನು 63-62 ಅಂಕಗಳಿಂದ ಪರಾಭವಗೊಳಿಸಿದ ತಮಿಳುನಾಡು ತಂಡ ಪ್ರಶಸ್ತಿ ಗೆದ್ದುಕೊಂಡಿತು.
ಇದಕ್ಕೂ ಮುನ್ನ ಮೂರನೇ ಸ್ಥಾನಕ್ಕಾಗಿ ನಡೆದ ಪುರುಷರ ವಿಭಾಗದ ಪಂದ್ಯದಲ್ಲಿ ಪಂಜಾಬ್ ತಂಡ ಐಎಎಫ್ ತಂಡವನ್ನು 88-66 ಮಣಿಸಿತು. ಮಹಿಳೆಯರ ವಿಭಾಗದಲ್ಲಿ ಕೇರಳ ತಂಡ ಸೌಥ್ ಸೆಂಟ್ರಲ್ ರೇಲ್ವೆ ತಂಡವನ್ನು 88-66 ಅಂಕಗಳಿಂದ ಪರಾಭವಗೊಳಿಸಿತು.
ಒಎನ್‌ಜಿಸಿ ತಂಡದ ಬೃಗುವಂಶಿ ಪುರುಷರ ವಿಭಾಗದ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ಭಾಜನರಾದರೆ, ಮಹಿಳೆಯರ ವಿಭಾಗದಲ್ಲಿ ತಮಿಳುನಾಡಿನ ಅನಿತಾ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ತಮ್ಮದಾಗಿಸಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.