ಟೇಲರ್ ಮುಂದೆ ಶ್ರೀಲಂಕಾ ಠುಸ್
ಮುಂಬೈ: ಮಹಿಳಾ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ 105ರನ್‌ಗಳ ಹೀನಾಯ ಸೋಲನುಭವಿಸಿದ್ದ ವೆಸ್ಟ್ ಇಂಡೀಸ್ ತಂಡ, ತಮ್ಮ ಎರಡನೇ ಪಂದ್ಯದಲ್ಲಿ ಸ್ಟೆಫಾನಿ ಟೇಲರ್ ಅವರ ಆರ್ಭಟದ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ ವಿರುದ್ಧ 209ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ವಿಂಡೀಸ್ ವನಿತೆಯರು, ಇದರ ಸಂಪೂರ್ಣ ಲಾಭ ಪಡೆಯುವಲ್ಲಿ ಯಶಸ್ವಿಯಾದರು. ನಿಗಧಿತ 50 ಓವರ್‌ಗಳಲ್ಲಿ ವಿಂಡೀಸ್ ತಂಡ 8 ವಿಕೆಟ್ ಕಳೆದುಕೊಂಡು 368 ರನ್‌ಗಳಿಸಿದರು.
ತಂಡದ ಆರಂಭಿಕರಾಗಿ ಬಂದ ಸ್ಟೆಫಾನಿ ಟೇಲರ್ 137 ಎಸೆತಗಳನ್ನು ಎದುರಿಸಿ 18 ಬೌಂಡರಿಗಳು ಹಾಗೂ 2 ಸಿಕ್ಸರ್‌ಗಳ ನೆರವಿನಿಂದ ಅಮೋಘ 171 ರನ್ ದಾಖಲಿಸಿದರು. ನಂತರ ಡೊಟಿನ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು. ಕೇವಲ 22 ಎಸೆತ ಎದುರಿಸಿದ ಇವರು 5 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ನೆರವಿನೊಂದಿಗೆ 50 ರನ್‌ಗಳಿಸಿದರು. ಇನಿಂಗ್ಸ್‌ನ ಕೊನೆಯಲ್ಲಿ ಬ್ಯಾಟಿಂಗ್ ಮಾಡಿದ ಅಗುಲೈರಾ 24 ಎಸೆತದಲ್ಲಿ ಅಜೇಯ 47ರನ್‌ಗಳಿಸಿದರು.
ಈ ಬೃಹತ್ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ವನಿತೆಯರು 40 ಓವರ್‌ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು ಕೇವಲ 159 ರನ್ ಗಳಿಸಲಷ್ಟೇ ಶಕ್ತವಾಯಿತು. ಆರಂಭದಿಂದಲೂ ವಿಂಡೀಸ್ ಬೌಲರ್‌ಗಳ ದಾಳಿಗೆ ನಡುಗಿದ ಶ್ರೀಲಂಕಾ ವನಿತೆಯರು ಸತತವಾಗಿ ತಮ್ಮ ವಿಕೆಟ್ ಕಳೆದುಕೊಳ್ಳುತ್ತಾ ಸೇಲಿನ ಸುಳಿಗೆ ಸಿಲುಕಿದರು.
8ನೇ ಕ್ರಮಾಂಕದ ರಸಂಗಿಕಾ ಗಳಿಸಿದ 28ರನ್ ಶ್ರೀಲಂಕಾ ತಂಡದ ಪರ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ್ತಿಯಾದರೆ, ಮೂರನೇ ಕ್ರಮಾಂಕದಲ್ಲಿ ಬಂದ ವೀರಕ್ಕೋಡಿ 22 ರನ್‌ಗಳಿಸಿದರು. ಈ ಇಬ್ಬರು ಆಟಗಾರ್ತಿಯರನ್ನು ಹೊರತುಪಡಿಸಿ ಉಳಿದ ಯಾವುದೇ ಆಟಗಾರ್ತಿಯರು 20 ರನ್ ಗಡಿ ದಾಟಲಿಲ್ಲ.
ವಿಂಡೀಸ್ ತಂಡದ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಟೆಫಾನಿ ಟೇಲರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

