ಮಹಿಳಾ ಕ್ರಿಕೆಟ್ ತಂಡಕ್ಕೆ ರಣತುಂಗಾ ಅಭಿನಂದನೆ
ಕೊಲಂಬೊ: ಮಹಿಳಾ ವಿಶ್ವಕಪ್ಕ್ರಿಕೆಟ್ನಲ್ಲಿ ಶ್ರೀಲಂಕಾ ತಂಡ ಎಲ್ಲರ ನಿರೀಕ್ಷೆಗೂ ಮೀರಿದ ಪ್ರದರ್ಶನವನ್ನು ನೀಡುತ್ತಿದ್ದು, ಈ ಪ್ರದರ್ಶನಕ್ಕೆ ಶ್ರೀಲಂಕಾದ ಮಾಜಿ ನಾಯಕ ಅರ್ಜುನ್ ರಣತುಂಗಾ ಅಭಿನಂದನೆ ಸಲ್ಲಿಸಿದ್ದಾರೆ.
ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಶ್ರೀಲಂಕಾ ವನಿತೆಯರ ತಂಡ, ಶ್ರೀಲಂಕಾ ಪುರುಷರ ತಂಡಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ರಣತುಂಗಾ ಅಭಿಪ್ರಾಯ ಪಟ್ಟಿದ್ದಾರೆ.
ಈ ಪಂದ್ಯಾವಳಿಯಲ್ಲಿ ಲಂಕಾ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ಆತಿಥೇಯ ಭಾರತ ತಂಡವನ್ನು ಮಣಿಸಿ ಸೂಪರ್ ಸಿಕ್ಸ್ ಹಂತಕ್ಕೆ ಲಗ್ಗೆ ಇಟ್ಟಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಮಹಿಳಾ ತಂಡವು ತಮ್ಮ ಪುರುಷರ ತಂಡಕ್ಕೆ ಉತ್ತಮ ಉದಾಹರಣೆಯಾಗಿದೆ. ಪುರುಷರ ತಂಡದಲ್ಲಿರುವ ಕೆಲ ಹಿರಿಯ ಆಟಗಾರರಿಗೆ ಆಟದ ಬದ್ಧತೆ ಬಗ್ಗೆ ತಿಳಿಯಲು ಉದಾಹರಣೆಯಾಗಿದೆ. ತಂಡದ ನಾಯಕಿ ಸಿರಿವರ್ಧನೆ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

