ಕ್ರೀಡೆ

3ನೇ ಏಕದಿನ ಪಂದ್ಯ: ಭಾರತಕ್ಕೆ ಭರ್ಜರಿ ಜಯ

3ನೇ ಏಕದಿನ ಪಂದ್ಯ: ಭಾರತಕ್ಕೆ ಭರ್ಜರಿ ಜಯ
Published On :

ರಾಂಚಿ: ಇಂಗ್ಲೆಂಡ್ ವಿರುದ್ಧ ರಾಂಚಿಯಲ್ಲಿ ನಡೆಯುತ್ತಿರುವ 3ನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್ ಗೆದ್ದರೂ ಇಂಗ್ಲೆಂಡ್ ತಂಡವನ್ನು ಭಾರತ ಬ್ಯಾಟಿಂಗ್‌ಗೆ ಆಹ್ವಾನಿಸಿತು. ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ಎದುರು ರನ್ ಗಳಿಸಲು ಪರದಾಡಿದರು. ಭಾರತೀಯ ಬೌಲರ್‌ಗಳು ಆರಂಭದಿಂದಲೂ ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳ ಮೇಲೆ ಪಾರಮ್ಯ ಮೆರೆದು, ಅವರನ್ನು 155 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

ಭಾರತದ ರವೀಂದ್ರ ಜಡೇಜಾ 19ರನ್ ನೀಡಿ 3 ವಿಕೆಟ್ ಕಬಳಿಸಿದರು. ಉಳಿದಂತೆ ಅಶ್ವಿನ್ 2 ವಿಕೆಟ್, ಇಶಾಂತ್ ಶರ್ಮಾ 2 ವಿಕೆಟ್, ಭುವನೇಶ್ವರ್ ಕುಮಾರ್, ಶಮಿ ಅಹ್ಮದ್, ಸುರೇಶ್ ರೈನಾ ತಲಾ 1 ವಿಕೆಟ್ ಪಡೆದರು.

156 ರನ್‌ಗಳ ಸಾಧಾರಣ ಗುರಿ ಪಡೆದ ಭಾರತ, ಆರಂಭದಲ್ಲಿಯೇ ಅಜಿಂಕ್ಯಾ ರಹಾನೆ ಅವರ ವಿಕೆಟ್ ಕಳೆದುಕೊಂಡಿತು. ವಿರಾಟ್ ಕೊಹ್ಲಿ ಜೊತೆಗೂಡಿದ ಗೌತಮ್ ಗಂಭೀರ್ ಅವರು 33 ರನ್ ಗಳಿಸಿ ಟ್ರೆಡ್‌ವೆಲ್‌ಗೆ ವಿಕೆಟ್ ಒಪ್ಪಿಸಿದರು. ಯುವರಾಜ್ ಜೊತೆಗೂಡಿದ ವಿರಾಟ್ ಕೊಹ್ಲಿ, ಜವಾಬ್ದಾರಿಯುತ ಆಟವಾಡಿ ಅರ್ಧಶತಕ ಗಳಿಸಿದರು. ಆಕರ್ಷಕ ಜೊತೆಯಾಟವಾಡಿದ ಈ ಜೋಡಿ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಿತು. ಭಾರತ ಗೆಲುವಿನ ಸಮೀಪದಲ್ಲಿರುವಾಗ ಯುವರಾಜ್‌ಸಿಂಗ್ ಟ್ರೆಡ್‌ವೆಲ್ ಅವರಿಗೆ ಬೌಲ್ಡ್ ಆದರು.

ನಂತರ ಬಂದ ನಾಯಕ ಧೋನಿ, ಕೊಹ್ಲಿ ಅವರೊಂದಿಗೆ ಸೇರಿ ಗೆಲುವಿನ ಔಪಚಾರಿಕತೆಯನ್ನು ಮುಗಿಸಿದರು. ಇಂಗ್ಲೆಂಡ್ ಪರ ಟ್ರೆಡ್ ವೆಲ್ 2 ವಿಕೆಟ್ ಮತ್ತು ಸ್ಟೀವೆನ್ ಫಿನ್ನ್ 1 ವಿಕೆಟ್ ಪಡೆದರು. ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-1 ಮುನ್ನಡೆ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.