ಕ್ರೀಡೆ

ಹ್ಯಾಟ್ರಿಕ್ ಹೊಸ್ತಿಲಲ್ಲಿ ಜೊಕೊವಿಚ್

Published On :

ಮೆಲ್ಬರ್ನ್: ಹ್ಯಾಟ್ರಿಕ್ ಸಾಧನೆಯ ಹೊಸ್ತಿಲಲ್ಲಿರುವ ಹಾಲಿ ಚಾಂಪಿಯನ್ ಸರ್ಬಿಯಾದ ನೋವಾಕ್ ಜೊಕೊವಿಚ್ ಅವರು ಆಸ್ಟ್ರೇಲಿಯಾ ಓಪನ್ ಗ್ರಾನ್ ಸ್ಲ್ಯಾಮ್‌ನ ಸಿಂಗಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.     ಹೀಗಾಗಿ ಜೊಕೊವಿಚ್ ಹ್ಯಾಟ್ರಿಕ್ ಸಾಧನೆಯೊಂದಿಗೆ ಹೊಸ ದಾಖಲೆಯನ್ನು ಬರೆಯಲಿದ್ದಾರೆಯೇ ಎಂಬ ಬಗ್ಗೆ ಈಗ ಟೆನಿಸ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಜೊಕೊವಿಚ್ ಅವರು ನಾಲ್ಕನೇ ಶ್ರೇಯಾಂಕದ ಆಟಗಾರ ಡೇವಿಡ್ ಫೆರರ್ ಅವರನ್ನು 6-2, 6-2, 6-1 ನೇರ ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿ, ಫೈನಲ್ ಪ್ರವೇಶಿಸಿದರು. ಶುಕ್ರವಾರ ನಡೆಯಲಿರುವ ಇನ್ನೊಂದು ಸೆಮಿಫೈನಲ್ ಪಂದ್ಯದಲ್ಲಿ ರೋಜರ್ ಫೆಡರರ್ ಮತ್ತು ಆ್ಯಂಡಿ ಮರ್ರೆ ಸೆಣಸಲಿದ್ದು, ಈ ಪಂದ್ಯದಲ್ಲಿ ಗೆದ್ದವರ ವಿರುದ್ಧ ಫೈನಲ್‌ನಲ್ಲಿ ಜೊಕೊವಿಚ್ ತಮ್ಮ ಹ್ಯಾಟ್ರಿಕ್ ಸಾಧನೆಗಾಗಿ ಹೋರಾಟ ನಡೆಸಲಿದ್ದಾರೆ. 'ಪಂದ್ಯದಲ್ಲಿ ನಾನು ವಿಸ್ಮಯಕಾರಿಯಾದ ಪ್ರದರ್ಶನ ನೀಡಿದೆ. ಅಲ್ಲದೆ, ಆರಂಭದಿಂದಲೇ ಯಾವುದೇ ರೀತಿಯ ಅಡೆತಡೆಗಳಿಲ್ಲದೇ ಮೇಲುಗೈ ಸಾಧಿಸಿದೆ. ನನ್ನ ವೃತ್ತಿ ಜೀವನದಲ್ಲೇ ಇದೊಂದು ಶ್ರೇಷ್ಠ ಪ್ರದರ್ಶನ' ಎಂದು ಪಂದ್ಯದ ನಂತರ ಜೊಕೊವಿಚ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.