ನಾಳೆಯಿಂದ ಫೆಡರೇಷನ್ ಕಪ್ ಪಂದ್ಯಾವಳಿ
ಬೆಂಗಳೂರು: ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ 27ನೇ ರಾಷ್ಟ್ರೀಯ ಫೆಡರೇಷನ್ ಕಪ್ ಬಾಸ್ಕೆಲ್‌ಬಾಲ್ ಚಾಂಪಿಯನ್‌ಷಿಪ್ ಆಯೋಜಿಸಿದೆ.
ಚಾಂಪಿಯನ್‌ಷಿಪ್‌ನಲ್ಲಿ ದೇಶದ ಪುರುಷರ ಮತ್ತು ಮಹಿಳೆಯರ ಅಗ್ರ ತಂಡಗಳು ಭಾಗವಹಿಸಲಿದ್ದು, ಪಂದ್ಯಗಳು ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ನಡೆಯುತ್ತವೆ.
ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಗೆದ್ದ ತಂಡಗಳಿಗೆ ಪ್ರತ್ಯೇಕವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳಿಗೆ ನಗದು ಬಹುಮಾನ ನೀಡಲಾಗುವುದು. ಮೊದಲ ಬಹುಮಾನ ರು. 1 ಲಕ್ಷ, ದ್ವಿತೀಯ ಬಹುಮಾನ ರು. 75 ಸಾವಿರ ಹಾಗೂ ತೃತೀಯ ಬಹುಮಾನ ರು. 50 ಸಾವಿರ ನೀಡಲಾಗುತ್ತದೆ. ಪಂದ್ಯಾವಳಿಯ ಒಟ್ಟು ಬಹುಮಾನ ಮೊತ್ತ್ತ ರು. 4, 50,000 ಲಕ್ಷವಾಗಿದೆ.
ಪಂದ್ಯಾವಳಿಗೆ ಆಗಮಿಸುವ ತಂಡಗಳಿಗೆ ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ಊಟ ಮತ್ತು ವಸತಿ ವ್ಯವಸ್ಥೆಯನ್ನು ಏರ್ಪಡಿಸಿದೆ. ಪಂದ್ಯಾವಳಿಯ ಸಂದರ್ಭದಲ್ಲಿ ರಾಜ್ಯದ ಮಾಜಿ ಮತ್ತು ಹಾಲಿ ಬಾಸ್ಕೆಟ್‌ಬಾಲ್ ಆಟಗಾರರನ್ನು ಸನ್ಮಾನ ಮಾಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

