ರಹಾನೆ ಮತ್ತೆ ಫಾರ್ಮ್‌ಗೆ ಬರುತ್ತಾರೆ: ದ್ರಾವಿಡ್
ಮುಂಬೈ: ಫಾರ್ಮ್ ಇಲ್ಲದೇ ಬಳಲುತ್ತಿರುವ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಜಿಂಕ್ಯ ರಹಾನೆ ಅವರು ಶೀಘ್ರದಲ್ಲೇ ಫಾರ್ಮ್ ಮರಳಲಿದ್ದಾರೆ ಎಂದು ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಸತತ 4 ಪಂದ್ಯಗಳಲ್ಲಿ ರಹಾನೆ ಅವರು ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ವಿಫಲರಾಗಿದ್ದರು.
ಈ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ದ್ರಾವಿಡ್, 'ಫಾರ್ಮ್‌ನಲ್ಲಿ ಇಲ್ಲದಿದ್ದರೂ ಅಜಿಂಕ್ಯ ರಹಾನೆ ಅವರು ಕೆಲವೊಂದು ಉತ್ತಮ ಹೊಡೆತಗಳನ್ನು ಬಾರಿಸಿದ್ದರು. ಒತ್ತಡದಿಂದಾಗಿ ಅವರ ಆಟ ಮೊನಚು ಕಳೆದುಕೊಂಡಿರಬಹುದು. ಅವರಲ್ಲಿ ಪ್ರತಿಭೆಯಿದೆ. ಶೀಘ್ರದಲ್ಲೇ ಅವರು ಮತ್ತೆ ಫಾರ್ಮ್ ಮರಳುತ್ತಾರೆ' ಎಂದು ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಟೀಂ ಇಂಡಿಯಾ ನಾಯಕ ಧೋನಿ ಕೂಡ, ರಹಾನೆ ಅವರು ಫಾರ್ಮ್‌ನಲ್ಲಿ ಇಲ್ಲದಿರುವುದನ್ನು ಒಪ್ಪಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

