ಕ್ರೀಡೆ

ವಾಂಗ್ ವಿರುದ್ಧ ಆನಂದ್‌ಗೆ ಅಚ್ಚರಿಯ ಸೋಲು

ವಾಂಗ್ ವಿರುದ್ಧ ಆನಂದ್‌ಗೆ ಅಚ್ಚರಿಯ ಸೋಲು
Published On :

ವಿಜ್ಕ್ ಆನ್ ಝೀ (ಹಾಲೆಂಡ್): ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಅವರು, ಇಲ್ಲಿ ನಡೆಯುತ್ತಿರುವ 75ನೇ ಟಾಟಾ ಸ್ಟೀಲ್ ಚೆಸ್ ಪಂದ್ಯಾವಳಿಯಲ್ಲಿ ಸೋಮವಾರ ಚೀನಾದ ವಾಂಗ್ ಹಾವೊ ಅವರ ವಿರುದ್ಧ ಅಚ್ಚರಿಯ ಸೋಲು ಅನುಭವಿಸಿದರು.
ಪಂದ್ಯಾವಳಿಯ ಇದುವರೆಗೂ ಉತ್ತಮ ಪ್ರದರ್ಶನ ನೀಡಿದ್ದ ಆನಂದ್, ಪಂದ್ಯಾವಳಿಯ ಕೊನೆಯ ಸುತ್ತಿನ ಪಂದ್ಯದಲ್ಲಿ ವಾಂಗ್ ಅವರ ವಿರುದ್ಧ ಸೋತರು.
ಈ ಸೋಲು ಅವರ ವಿಶ್ವ ರಾಂಕಿಂಗ್‌ನ ಸ್ಥಾನದಲ್ಲಿ ಯಾವುದೇ ಬದಲಾವಣೆ ತಂದಿಲ್ಲ. ಈ ಪಂದ್ಯಾವಳಿಯಲ್ಲಿ ನೀಡಿದ ಉತ್ತಮ ಪ್ರದರ್ಶನದಿಂದ ಅವರು 7 ರೇಟಿಂಗ್ ಅಂಕಗಳನ್ನು ಪಡೆದಿದ್ದಾರೆ.
ಮ್ಯಾಗ್ನಸ್‌ಗೆ ಪ್ರಶಸ್ತಿ: ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್ ಅವರು ಈ ಪಂದ್ಯಾವಳಿಯನ್ನು ಗೆಲ್ಲುವಲ್ಲಿ ಯಶಸ್ವಿಯಾದರು.
ಸೋಮವಾರ ತಮ್ಮ ಅಂತಿಮ ಸುತ್ತಿನ ಪಂದ್ಯದಲ್ಲಿ ಹಾಲೆಂಡ್‌ನ ಆನಿಶ್ ಗಿರಿ ಅವರ ವಿರುದ್ಧ ಪ್ರಯಾಸದ ಜಯ ಗಳಿಸಿದ ಅವರು ಪಂದ್ಯಾವಳಿಯಲ್ಲಿ ಒಟ್ಟು 10 ಅಂಕಗಳನ್ನು ಗಳಿಸುವ ಮೂಲಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.