ಹರಿಣಗಳ ಸೋಲಿಸಿದ ಆಂಗ್ಲರು

ಮುಂಬೈ: ಮಹಿಳಾ ವಿಶ್ವಕಪ್‌ನ ದಿನದ ಇನ್ನೊಂದು ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವನಿತೆಯರ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 51 ರನ್‌ಗಳ ಅಂತರದಿಂದ ಜಯ ಕಂಡುಕೊಂಡಿತು.
ಟಾಸ್ ಸೋತರೂ ದೊರಕಿದ ಬ್ಯಾಟಿಂಗ್ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಇಂಗ್ಲೆಂಡ್ ವನಿತೆಯರು ನಿಗದಿತ ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 270 ರನ್‌ಗಳ ಕಲೆ ಹಾಕಿದರು. ನಂತರ ಈ ಮೊತ್ತವನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾವನ್ನು 219 ರನ್‌ಗಳಿಗೆ ನಿಯಂತ್ರಿಸುವ ಮೂಲಕ ಜಯ ಕಂಡುಕೊಂಡಿತು. ಇಂಗ್ಲೆಂಡ್ ಪರ ಆರಂಭಿಕ ಆಟಗಾರ್ತಿ ನಾಯಕಿ ಚಾರ್ಲೊಟ್ಟೆ ಎಡ್ವರ್ಡ್ಸ್ (78) ಅರ್ಧ ಶತಕ ಗಳಿಸಿ ತಂಡ ಉತ್ತಮ ಮೊತ್ತ ಕಲೆಹಾಕಲು ನೆರವಾದರು. ದಕ್ಷಿಣ ಆಫ್ರಿಕಾ ಪರ ತ್ರಿಶಾ ಚೆಟ್ಟಿ (57) ಮತ್ತು ಡು ಪ್ರೀಜ್ (ಅಜೇಯ 65) ಅರ್ಧ ಶತಕ ದಾಖಲಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


