ಕಿವೀಸ್ ಸುಲಭವಲ್ಲ: ಸ್ಟುವರ್ಟ್ ಬ್ರಾಡ್
ಅಕ್ಲೆಂಡ್: ಇತ್ತೀಚೆಗೆ ಕಳಪೆ ಪ್ರದರ್ಶನ ನೀಡುತ್ತಿರುವ ನ್ಯೂಜಿಲೆಂಡ್ ತಂಡವನ್ನು ನಾವು ಸುಲಭವಾಗಿ ಪರಿಗಣಿಸುವುದಿಲ್ಲ ಎಂದು ಇಂಗ್ಲೆಂಡ್ ಟಿ20 ತಂಡದ ನಾಯಕ ಸ್ಟುವರ್ಟ್ ಬ್ರಾಡ್ ಬುಧವಾರ ಹೇಳಿದ್ದಾರೆ. ರಾಸ್ ಟೇಲರ್ ಅವರನ್ನು ನಾಯಕತ್ವದಿಂದ ತೆಗೆದು ಹಾಕಿ, ಬ್ರೆಂಡಾನ್ ಮೆಕಲಂ ಅವರಿಗೆ ನಾಯಕತ್ವ ನೀಡಿದ ನಂತರ ಕಿವೀಸ್ ಮತ್ತಷ್ಟು ಹೀನಾಯವಾಗಿಸೋಲನುಭವಿಸುತ್ತಿದೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಹೀನಾಯ ಸೋಲನುಭವಿಸಿದೆ. ಪ್ರವಾಸಿ ಇಂಗ್ಲೆಂಡ್ ಸರಣಿಯಲ್ಲಿ ಫೇವರಿಟ್ ಎನಿಸಿದೆ. ಸರಣಿಯಲ್ಲಿ ಉಭಯ ತಂಡಗಳು ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನಾಡಲಿವೆ. ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ಸೋತಿರಬಹುದು. ಆದರೆ, ಸರಣಿ ನಡೆಯುತ್ತಿರುವುದು ಅವರ ತವರಿನ ಅಂಗಣದಲ್ಲಿ ಎಂದಿದ್ದಾರೆ ಬ್ರಾಡ್. 'ನ್ಯೂಜಿಲೆಂಡ್ ತಂಡದಲ್ಲಿ ಅನುಭವಿ ಟಿ20 ಆಟಗಾರರಿದ್ದಾರೆ. ಅವರನ್ನು ನಿಯಂತ್ರಹಿಸುವಲ್ಲಿ ನಾವು ತಯಾರಿ ಮಾಡಿಕೊಳ್ಳುವ ಅಗತ್ಯವಿದೆ. ಅಲ್ಲಿನ ಪರಿಸ್ಥಿತಿಯನ್ನು ಸಾಧ್ಯವಾದಷ್ಟು ನಮಗೆ ಅನುಕೂಲವಾಗುವಂತೆ ನೋಡಿಕೊಳ್ಳಲು ನಾವು ಪ್ರಯತ್ನಿಸುತ್ತೇವೆ' ಎಂದಿದ್ದಾರೆ ಬ್ರಾಡ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

