ಇನ್ನೂ ಫಿಟ್ ಆಗಿಲ್ಲ: ನಾಡಾಲ್
ಮ್ಯಾಡ್ರಿಡ್: ಖ್ಯಾತ ಟೆನಿಸ್ ತಾರೆ ಸ್ಪೇನ್‌ನ ರಫೆಲ್ ನಡಾಲ್ ಅವರು ಮೊಣಕಾಲು ನೋವಿನಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲವಂತೆ. ಚೀಲೆಯಲ್ಲಿ ಬರುವ ವಾರ ನಡೆಯಲಿರುವ ವರ್ಷದ ಮೊದಲ ಜೇಡಿ ಮಣ್ಣಿನ ಅಂಗಣದಲ್ಲಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಎದುರು ನೋಡುತ್ತಿದ್ದರು. ಆದರೆ, ಸಂಪೂರ್ಣ ಗಾಯದಿಂದ ಚೇತರಿಸಿಕೊಳ್ಳದಿರುವುದು ಅವರಿಗೆ ಅಡ್ಡಿಯನ್ನುಂಟು ಮಾಡಿದೆ. ಗಾಯದ ಹಿನ್ನೆಲೆಯಲ್ಲಿ ಕಳೆದ 7 ತಿಂಗಳಿಂದ ಯಾವುದೇ ಪಂದ್ಯಾವಳಿಯಲ್ಲಿ ಭಾಗವಹಿಸದಿರುವ ನಡಾಲ್, ಇತ್ತೀಚೆಗಷ್ಟೇ ಮುಕ್ತಾಯಗೊಂಡ ಆಸ್ಟ್ರೇಲಿಯನ್ ಓಪನ್ ಪಂದ್ಯಾವಳಿಯಿಂದಲೂ ಹೊರಗೆ ಉಳಿದಿದ್ದರು. 'ಉನ್ನತ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಲು ನಾನು ಎದುರು ನೋಡುತ್ತಿದ್ದೇನೆ. ಆದರೆ, ಮೊಣಕಾಲು ನೋವಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಇದು ಸಾಧ್ಯವಾಗುತ್ತಿಲ್ಲ. ಉನ್ನತ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಇನ್ನೂ ಸಮಯವಿದೆ. ಅಷ್ಟರೊಳಗೆ ಗಾಯದಿಂದ ಚೇತರಿಸಿಕೊಳ್ಳುವ ಭರವಸೆ ಇದೆ' ಎಂದು ನಡಾಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

