ರಾಜ್ಯಮಟ್ಟದ ಬ್ಯಾಡ್ಮಿಂಟನ್
ಬೆಂಗಳೂರು: ಹೋಲಿಹಾಕ್ ಕ್ರೀಡಾ ಸಂಸ್ಥೆ 17 ಮತ್ತು 19 ವರ್ಷದೊಳಗಿನ 5ಸ್ಟಾರ್ ಸ್ಟೇಟ್ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ನಡೆಸಲಿದೆ ಎಂದು ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆ ಶನಿವಾರ ಪ್ರಕಟಿಸಿದೆ. ಪಂದ್ಯಾವಳಿ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಯಲ್ಲಿ ಇದೇ ಜುಲೈ 18ರಿಂದ 20ರವರೆಗೆ ನಡೆಯಲಿದೆ. ಪಂದ್ಯಾವಳಿಯಲ್ಲಿ ಬಾಲಕ ಮತ್ತು ಬಾಲಕಿಯರ ಸಿಂಗಲ್ಸ್ ಮತ್ತು ಡಬಲ್ಸ್ ಪಂದ್ಯಗಳು ನಡೆಯಲಿವೆ.
ಪಂದ್ಯಾವಳಿಯಲ್ಲಿ ಭಾಗವಸಲು ಆಸಕ್ತರು 12, ಜುಲೈ 2013 ಸಂಜೆ 5 ಗಂಟೆಯೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ವಿವರಗಳಿಗೆ 080- 42788888 ಅಥವಾ 9980558594 ದೂರವಾಣಿಗೆ ಸಂಪರ್ಕಿಸಬಹುದು.
ಬಾಸ್ಕೆಟ್‌ಬಾಲ್: ಏಷ್ಯನ್ ಚಾಂಪಿಯನ್‌ಷಿಪ್‌ಗೆ ಭಾರತ
ನವದೆಹಲಿ: ಭಾರತದ 16 ವರ್ಷದೊಳಗಿನ ಬಾಲಕರ ಬಾಸ್ಕೆಟ್ ಬಾಲ್ ತಂಡ ಏಷ್ಯನ್ ಚಾಂಪಿಯನ್‌ಷಿಪ್‌ಗೆ ಅರ್ಹತೆ ಪಡೆದುಕೊಂಡಿದೆ. ಏಷ್ಯನ್ ಚಾಂಪಿಯನ್‌ಷಿಪ್ ಇದೇ ವರ್ಷ ಇರಾನ್‌ನಲ್ಲಿ ಸೆಪ್ಟೆಂಬರ್ 25ರಿಂದ ಅಕ್ಟೋಬರ್ 4ರವರೆಗೆ ನಡೆಯಲಿದೆ. ಢಾಕಾದಲ್ಲಿ ನಡೆದ ದಕ್ಷಿಣ ಏಷ್ಯನ್ ಬಾಸ್ಕೆಟ್‌ಬಾಲ್ ಸಂಸ್ಥೆಯ ಅರ್ಹತಾ ಸುತ್ತಿನಲ್ಲಿ ಎಲ್ಲ ಪಂದ್ಯಗಳಲ್ಲೂ ಜಯ ಸಾಧಿಸಿದ ಭಾರತ ತಂಡ, ಏಷ್ಯನ್ ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಯಿತು. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಮಾಲ್ಡೀವ್ಸ್ ವಿರುದ್ಧ 95-50 ಅಂಕಗಳಿಂದ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿತು. ನಂತರ ನೇಪಾಳದ ವಿರುದ್ಧ 92-22 ಅಂಕಗಳಿಂದ ಜಯ ಕಂಡುಕೊಂಡಿತು. ತಮ್ಮ ಅಂತಿಮ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತ ಅತಿಥೇಯ ಬಾಂಗ್ಲಾದೇಶವನ್ನು 103-59 ಅಂಕಗಳಿಂದ ಸೋಲಿಸುವ ಮೂಲಕ ಏಷ್ಯನ್ ಚಾಂಪಿಯನ್‌ಷಿಪ್‌ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

