ಆ.2ರ ಸಭೆಗೆ ಶ್ರೀನಿ ಮುಖ್ಯಸ್ಥ?
ಕೊಲ್ಕತಾ: ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದಲ್ಲಿ ಮೇಯಪ್ಪನ್ಗೆ ತನಿಖಾ ಸಮಿತಿ ಕ್ಲೀನ್ ಚಿಟ್ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಮರಳಲು ಸಿದ್ಧರಾಗಿರುವ ಎನ್. ಶ್ರೀನಿವಾಸನ್ ಆಗಸ್ಟ್ 2ರಂದು ನಡೆಯಲಿರುವ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆಗಳಿವೆ.
ಭಾನುವಾರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಬಿಸಿಸಿಐ ಹಂಗಾಮಿ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ತನಿಖೆಯ ವರದಿಯನ್ನು ಐಪಿಎಲ್ ಆಡಳಿತ ಮಂಡಳಿಗೆ ನೀಡಲಾಗಿದೆ ಎಂದು ತಿಳಿಸಿದರು.
ಐಪಿಎಲ್ ಆಡಳಿತ ಮಂಡಳಿ ಆ.2ರಂದು ನವದೆಹಲಿಯಲ್ಲಿ ಸಭೆ ಸೇರಲಿದ್ದು, ಇಲ್ಲಿ ಚರ್ಚೆ ನಡೆಸಿ ನಂತರ ಈ ವಿಷಯಗಳ ಮೇಲೆ ತೀರ್ಮಾನ ಕೈಗೊಳ್ಳುವುದು ಎಂದು ತಿಳಿಸಿದರು.
ತನಿಖಾ ವರದಿಯಲ್ಲಿ ಇಂಡಿಯಾ ಸಿಮೆಂಟ್ಗೆ ಕ್ಲೀನ್ಚಿಟ್ ನೀಡಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ದಾಲ್ಮಿಯಾ, ಈ ಕುರಿತ ಅಂತಿಮ ತೀರ್ಮಾನವನ್ನು ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಭೆ ಈ ವಿಷಯವನ್ನು ಚರ್ಚೆ ನಡೆಸಲು ಸೂಕ್ತ ವೇದಿಕೆಯಾಗಿದೆ. ಆಡಳಿತ ಮಂಡಳಿ, ವರದಿಯನ್ನು ಪರಿಶೀಲಿಸಿ ಆನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು. ನಂತರ ಈ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಮೇಯಪ್ಪನ್ಗೆ ಕ್ಲೀನ್ಚಿಟ್ ನೀಡಲಾಗಿದೆಯೇ ಎಂಬ ಪ್ರಶ್ನೆಗೆ ನಿರಂಜನ್ ಶಾ ಯಾವುದೇ ಉತ್ತರ ನೀಡಲಿಲ್ಲ. ಆದರೆ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಸಮಿತಿಯು ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಕ್ಲೀನ್ಚಿಟ್ ಪಡೆದಿದ್ದರೂ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾ ಸಮಿತಿಗೆ ಯಾವುದೇ ಖಚಿತ ಸಾಕ್ಷಿ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ. ಇನ್ನು ಆ.2ರಂದು ನಡೆಯಲಿರುವ ಸಭೆಗೆ ಯಾರು ಅಧ್ಯಕ್ಷತೆ ವಹಿಸುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ದಾಲ್ಮಿಯಾ, ಈ ವಿಷಯದ ಕುರಿತು ಶ್ರೀನಿವಾಸನ್ ನಿರ್ಧಾರ ತೆಗೆದುಕೊಳ್ಳಲಿ ಎಂದು ತಿಳಿಸಿದರು.
ಇದೇವೇಳೆ ಬಿಸಿಸಿಐ ಭ್ರಷ್ಟಾಚಾರ ನಿಗ್ರಹಧಳ ಮುಖ್ಯಸ್ಥ ರವಿ ಸಾವಂತ್ ವರದಿ ಬಗ್ಗೆ ಮಾಹಿತಿ ನೀಡಿದ ದಾಲ್ಮಿಯಾ, ಈ ಕುರಿತು ಚರ್ಚೆ ನಡೆಸಿಲಾಯಿತಾದರು, ಸದ್ಯ ಕೇವಲ ಒಬ್ಬ ಆಟಗಾರ ಅಜಿತ್ ಚಾಂಡಿಲ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ ತನಿಖೆ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ.
ರವಿ ತಮ್ಮ ಮಗನ ಮದುವೆಗಾಗಿ ರಜೆಯಲ್ಲಿದ್ದು, ಅವರು ವಾಪಸ್ಸಾಗುವವರೆಗೂ ಕಾಯುತ್ತೇವೆ. ಆನಂತರ ತನಿಖೆ ಪ್ರಕ್ರಿಯೆ ಮುಗಿಯುವವರೆಗೂ ಕಾಯುತ್ತೇವೆ ಎಂದು ತಿಳಿಸಿದರು.
ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀವ್ ಶುಕ್ಲಾ ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಮುಂಬರುವ ಸಭೆಗೆ ಯಾರು ಸಾರಥ್ಯವಹಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ದಾಲ್ಮಿಯಾ, ಶುಕ್ಲಾ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯುವಂತೆ ನಾನು ಮನವಿ ಮಾಡಿದ್ದೇನೆ. ಅಲ್ಲದೆ ನಾನು ಅವರ ರಾಜಿನಾಮೆಯನ್ನು ಒಪ್ಪಿಕೊಂಡಿಲ್ಲ ಎಂದು ತಿಳಿಸಿದರು. ಇನ್ನು ರಿತಿ ಸ್ಫೋಟ್ಸ್ ಪ್ರಕರಣದಲ್ಲಿ ಧೋನಿ ಭಾಗಿಯಾಗಿರುವ ಪ್ರಕರಣದ ಬಗ್ಗೆ ಮಾತನಾಡಿದ ದಾಲ್ಮಿಯಾ ನಾವು ಈ ಪ್ರಕರಣದಲ್ಲಿ ಯಾವುದೇ ವಿಷಯವನ್ನು ಮುಚ್ಚಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ಪ್ರವಾಸ ಕುರಿತು ಮುಂದಿನ ದಿನಗಳಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಹಾಗೂ ಡೊಪಿಂಗ್ ಪರೀಕ್ಷೆಯಲ್ಲಿ ಪ್ರದೀಪ್ ಸಾಗ್ವಾನ್ ಅನುತ್ತೀರ್ಣರಾಗಿದ್ದು, ಈ ಪ್ರಕರಣವನ್ನು ಉದ್ದೀಪನಾ ನಿಗ್ರಹ ನಿಯಮದಡಿ ತನಿಖೆ ನಡೆಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

