ಬೆಂಗಳೂರು ಬಳಿ ಸ್ಪೋರ್ಟ್ಸ್ ಸಿಟಿ
ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸೌಲಭ್ಯಗಳುಳ್ಳ ಸ್ಪೋರ್ಟ್ಸ್ ಸಿಟಿ ನಿರ್ಮಾಣ ಕುರಿತು ರಾಜ್ಯ ಸರ್ಕಾರದೊಂದಿಗೆ ಚಿಂತನೆ ನಡೆಸಿದ್ದೇವೆ ಎಂದು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ (ಕೆಒಎ) ಅಧ್ಯಕ್ಷ ಕೆ. ಗೋವಿಂದ್‌ರಾಜ್ ಹೇಳಿದರು. ಕೆಒಎ ವಾರ್ಷಿಕ ಸಾಮಾನ್ಯ ಸಭೆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ಕುರಿತು ಕ್ರೀಡಾ ಸಚಿವರಾದ ಕೆ. ಅಭಯ್‌ಚಂದ್ರ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಅಲ್ಲದೆ, ಬೆಂಗಳೂರಿನ ಹೊರ ವಲಯದಲ್ಲಿರುವ ಚಿಕ್ಕಬಳ್ಳಾಪುರ, ಮೈಸೂರ್ ರಸ್ತೆಯ ಕೆಂಗೇರಿ ಸೇರಿದಂತೆ ಕೋಲಾರದ ಬಳಿ ಅಗತ್ಯವಿರುವ ಭೂಮಿಗಾಗಿ ಪರಿಶೀಲಿಸಲಾಗಿದೆ. ಆದರೆ, ಯಾವ ಸ್ಥಳದಲ್ಲಿ ನಿರ್ಮಿಸಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ, ಅಂದಾಜು 40ರಿಂದ 50 ಎಕರೆ ಭೂಮಿಯ ಅಗತ್ಯವಿದ್ದು, ಸರ್ಕಾರಿ ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ಸ್ಪೋರ್ಟ್ಸ್ ಸಿಟಿಯನ್ನು ನಿರ್ಮಿಸುವ ಉದ್ದೇಶವಿದೆ ಎಂದರು.
ಅರ್ಧಕ್ಕೆ ನಿಂತಿರುವ ಬಿಜಾಪುರ ವೆಲೋಡ್ರೋಮ್ ನಿರ್ಮಾಣವನ್ನು ಪೂರ್ಣಗೊಳಿಸಲು ರು. 2 ಕೋಟಿ ಹಣ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ. ಮೈಸೂರು ಅಥವಾ ಹೊಸಕೋಟೆಯಲ್ಲಿ ಇನ್ನೊಂದು ವೆಲೋಡ್ರೋಮ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದರು.
ಐದು ಸಂಸ್ಥೆಗಳಿಗೆ ಅನುಮತಿ: ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಇತ್ತೀಚೆಗೆ ನಡೆದ ತನ್ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಜ್ಯದ ಐದು ಕ್ರೀಡಾ ಸಂಸ್ಥೆಗಳಿಗೆ ಅನುಮತಿ ನೀಡಿದೆ. ಕರ್ನಾಟಕ ನೆಟ್ ಬಾಲ್ ಅಸೋಸಿಯೇಷನ್, ಹಾಕಿ ಕರ್ನಾಟಕ ಅಸೋಸಿಯೇಷನ್, ವುಸು ಅಸೋಸಿಯೇಷನ್, ಅಮೆಚೂರ್ ಕರ್ನಾಟಕ ರೈಡರ್ಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಖೋ ಖೋ ಅಸೋಸಿಯೇಷನ್‌ಗೆ ಮಾನ್ಯತೆ ನೀಡಲಾಗಿದೆ. ಅಲ್ಲದೆ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಒಲಿಂಪಿಕ್ಸ್ ಸಂಸ್ಥೆಯನ್ನು ಆರಂಭಿಸಲು ಸಭೆಯಲ್ಲಿ ತಿದ್ದುಪಡಿ ತರಲಾಗಿದೆ.
ಎರಡು ವರ್ಷಗಳಿಗೊಮ್ಮೆ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುವಂತೆ ಮಾಡಲು ಮಖ್ಯಮಂತ್ರಿಗಳೆ ಕೆಒಎ ಮನವಿ ಮಾಡಿಕೊಂಡಿದೆಯಂತೆ.ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳುಗೆ ಮನೆಗಳನ್ನು ನೀಡಲು ವಸತಿ ಸಚಿವ್ ಅಂಬರೀಶ್ ಭರವಸೆ ನೀಡಿರುವುದಾಗಿ ಗೋವಿಂದ್‌ರಾಜ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

