ಲಂಕಾ ವಿರುದ್ಧ ಬಾಂಗ್ಲಾದೇಶಕ್ಕೆ ರೋಚಕ ಜಯ: ಸರಣಿ ಸಮಬಲ
ಪಲ್ಲೆಕೆಲೆ: ಮಳೆ ಅಡ್ಡಿಯಿಂದ ಡಕ್ವರ್ತ್ ಲೂಯಿಸ್ ನಿಯಮ ಅಳವಡಿಸಲಾದ 3ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ 3 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ, ತಿಲಕರತ್ನೆ ದಿಲ್ಷಾನ್ (125) ಅಮೋಘ ಶತಕದ ನೆರವಿನೊಂದಿಗೆ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 302 ರನ್ ಗಳಿಸಿತು. ಆದರೆ, ನಂತರ ಬಾಂಗ್ಲಾ 13.4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 78 ರನ್ ಗಳಿಸುತ್ತಿದ್ದಂತೆ ಮಳೆ ಆರಂಭವಾಯಿತು. ಹೀಗಾಗಿ ಪಂದ್ಯವನ್ನು ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 27 ಓವರ್‌ಗಳಿಗೆ ಸೀಮಿತಗೊಳಿಸಿ 183 ರನ್‌ಗಳ ಗುರಿ ನೀಡಲಾಯಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾ 7 ವಿಕೆಟ್ ಕಳೆದುಕೊಂಡು ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ 184 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಹೀಗಾಗಿ ಲಂಕಾದ ದಿಲ್ಷಾನ್ ಶತಕ ವ್ಯರ್ಥವಾಯಿತು.ಇದರೊಂದಿಗೆ 3 ಪಂದ್ಯಗಳ ಸರಣಿ 1-1 ಅಂತರದಿಂದ ಸಮಬಲಗೊಂಡಿತು.
ಶ್ರೀಲಂಕಾ 302/9 (50 ಓವರ್)
ದಿಲ್ಷಾನ್ 125, ಪೆರೆರಾ 56
ಬೌಲಿಂಗ್: ರಜಾಕ್ 62/5, ಮೊಹ್ಮದುಲ್ಲಾ 50/1
ಬಾಂಗ್ಲಾ 184/7 (26 ಓವರ್)
ಅನಾಮುಲ್ ಹಕ್ 40, ನಾಸೀರ್ ಹುಸೇನ್ 33
ಬೌಲಿಂಗ್: ಮಲಿಂಗಾ 29/2, ಸೇನಾನಾಯಕೆ 26/2
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

