'ಪ್ರಶಸ್ತಿ ಉಳಿಸಿಕೊಳ್ಳಲು ಸಿದ್ಧ'
ನವದೆಹಲಿ: ಐಪಿಎಲ್ನ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಈ ಬಾರಿಯೂ ಪ್ರಶಸ್ತಿಯನ್ನು ತಮ್ಮಲ್ಲೇ ಉಳಿಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಗಂಭೀರ್ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವ ವದಂತಿಗಳು ಹರಡಿದ್ದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಗಂಭೀರ್, ನಾನು ಏ.3 ರಂದು ನಡೆಯಲಿರುವ ಮೊದಲ ಪಂದ್ಯದಿಂದಲೂ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.
ನಾನು ಕಳೆದ 10 ದಿನಗಳಿಂದ ಕ್ರಿಕೆಟ್ ಆಡಿಲ್ಲ, ಇನ್ನು ನನ್ನಲ್ಲಿ ಆಯಾಸ ಇದೆ ಹಾಗಾಗಿ ನಿಧಾನವಾಗಿ ಆಡಲು ಆರಂಭಿಸಿದ್ದೇನೆ. ಏ.3ರಂದು ನಡೆಯಲಿರುವ ಆರಂಭಿಕ ಪಂದ್ಯದಲ್ಲಿ ಆಡುತ್ತೇನೆ. ಆ ಪಂದ್ಯದ ನಂತರ ನಮಗೆ ಹೆಚ್ಚು ದಿನಗಳ ಅಂತರ ವಿಶ್ರಾಂತಿ ಸಿಗಲಿದ್ದು ಚೇತರಿಸಿಕೊಳ್ಳಲು ಸಹಾಯಕವಾಗಲಿದೆ ಎಂದು ಗಂಭೀರ್ ತಿಳಿಸಿದ್ದಾರೆ.
ಕಳೆದ ಬಾರಿ ಚಾಂಪಿಯನ್ ಆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವ ವಹಿಸಿದ್ದ ಗಂಭೀರ್ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ಗಳಿಸಿದ್ದ ಎರಡನೇ ಆಟಗಾರನಾಗಿ ಹೊರ ಹೊಮ್ಮಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡದ ಬಗ್ಗೆ ಬೇಸರ ಇಲ್ಲ ಎಂದು ಹೇಳಿದ ಗಂಭೀರ್, ಭಾರತಕ್ಕಾಗಿ ಆಡುವುದು ನನ್ನನ್ನು ಹೆಚ್ಚು ಹುರಿದುಂಬಿಸುತ್ತದೆ. ಆದರೆ ಒರ್ವ ಕ್ರೀಡಾಳು ಆಗಿ ನಾನು ಉತ್ತಮ ಪ್ರದರ್ಶನ ನೀಡಲು ಬಯಸುತ್ತೇನೆ. ಕೆಲವು ತಿಂಗಳಿನಿಂದ ನಾನು ದೆಹಲಿ ತಂಡದ ಪರ ಆಡಿರಲಿಲ್ಲ ಹಾಗಾಗಿ ಈ ಸಮಯದಲ್ಲಿ ನಾನು ವಿಜಯ್ ಹಜಾರೆ ಟ್ರೋಫಿಯಲ್ಲಿ ದೆಹಲಿ ಪರ ಆಡಿದೆ. 17-18 ವರ್ಷಗಳ ನಂತರ ಈ ಟ್ರೋಫಿಯನ್ನು ಗೆದ್ದೆವು. ನಾನು ನನ್ನ ತಂಡದ ಪರ ಹೆಚ್ಚು ರನ್ಗಳಿಸಲು ಪ್ರಯತ್ನಿಸುತ್ತೇನೆ ಎಂದು ಗಂಭೀರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

