ಪ್ರಶಸ್ತಿಗಾಗಿ ಸೆರೆನಾ, ಶರಪೋವಾ ಸೆಣಸು
ಐದು ಬಾರಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿರುವ ಅಮೆರಿಕದ ಸೆರೆನಾ ವಿಲಿಯಮ್ಸ್ ಈ ಬಾರಿಯೂ ಮಿಯಾಮಿ ಓಪನ್ ಪ್ರಶಸ್ತಿ ಗೆಲ್ಲುವ ಕಾತರದಲ್ಲಿದ್ದಾರೆ...

ಮಿಯಾಮಿ: ಐದು ಬಾರಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿರುವ ಅಮೆರಿಕದ ಸೆರೆನಾ ವಿಲಿಯಮ್ಸ್ ಈ ಬಾರಿಯೂ ಮಿಯಾಮಿ ಓಪನ್ ಪ್ರಶಸ್ತಿ ಗೆಲ್ಲುವ ಕಾತರದಲ್ಲಿದ್ದಾರೆ. ಫೈನಲ್ ಪಂದ್ಯದಲ್ಲಿ ಮರಿಯಾ ಶರಪೋವಾ ಅವರನ್ನು ಎದುರಿಸಲಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ತಮ್ಮ ಎದುರಾಳಿ ಅಗ್ನಿಸ್ಕಾ ರಡ್ವಾಂಸ್ಕಾ ಅವರನ್ನು 6-0, 6-3 ಸೆಟ್‌ಗಳ ಅಂತರದಿಂದ ಮಣಿಸುವ ಮುಲಕ ಸೆರೆನಾ ಫೈನಲ್ ಹಂತಕ್ಕೆ ಲಗ್ಗೆ ಇಟ್ಟಿದ್ದಾರೆ. ಫೈನಲ್‌ನಲ್ಲಿ ನಂ.1 ಆಟಗಾರ್ತಿ ಸೆರೆನಾ ನಾಲ್ಕು ಬಾರಿ ರನ್ನರ್ ಅಪ್ ಆಗಿರುವ ಮರಿಯಾ ಶರಪೋವಾ ವಿರುದ್ಧ ಶನಿವಾರ ಪ್ರಶಸ್ತಿಗಾಗಿ ಕಾದಾಟ ನಡೆಸಲಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ಪ್ರಯಾಸದ ಜಯಗಳಿಸಿದ್ದ ಸೆರೆನಾ, ತಮ್ಮ ಸೆಮಿಫೈನಲ್ ಪಂದ್ಯದಲ್ಲಿ ಯಾವುದೇ ತಪ್ಪುಗಳನ್ನು ಮಾಡದೆ ಉತ್ತಮ ಅಂತರದಲ್ಲಿ ಜಯ ಗಳಿಸಿದ್ದಾರೆ. ಇತ್ತ ಮರಿಯಾ ಶರಪೋವಾ ಕೂಡ ತಮ್ಮ ಸೆಮಿಫೈನಲ್ ಪಂದ್ಯದಲ್ಲಿ ಜೆಲೆನಾ ಜಾಂಕೊವಿಚ್ ಅವರನ್ನು 6-2, 6-1 ಸೆಟ್‌ಗಳ ಅಂತರದಲ್ಲಿ ಮಣಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಪ್ರಶಸ್ತಿ ಗೆಲ್ಲಲು ತುದಿಗಾಲಲ್ಲಿ ನಿಂತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


